ಮನೆಗಳ್ಳತನ ತಡೆಗಟ್ಟಲು ಗೃಹ ಸಂರಕ್ಷಣೆ ಆಪ್ ರಚನೆ

ಹೆಲ್ಮೆಟ್ ಧಾರಣೆ ಕಡ್ಡಾಯ-ರಿಯಾಯತಿಯಿಲ್ಲ
ರಾಯಚೂರು.ಜೂ.16- ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮನೆಗಳ್ಳತನ ಪ್ರಕರಣಗಳನ್ನು ತಡೆಗಟ್ಟಲು ಗೃಹ ಸಂರಕ್ಷಣೆಯ ಆಪ್ ರಚನೆ ಮಾಡಲಾಗುತ್ತಿದೆ. ಮನೆ ಬೀಗ ಹಾಕಿ ಬೇರೆ ಊರಿಗೆ ಹೋಗುವವರು ಈ ಆಪ್‌ಗೆ ಮಾಹಿತಿ ನೀಡಿರುವುದರಿಂದ ಪೊಲೀಸ್ ಗಸ್ತಿಗೆ ಸಹಕಾರಿಯಾಗಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಹೇಳಿದರು.
ಅವರು ನಿನ್ನೆ ನಗರದ ಸದಾರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದುವರೆಗೂ ಹೆಲ್ಮೆಟ್ ಧರಿಸಲು ವಿನಾಯಿತಿ ನೀಡಲಾಗುತ್ತಿತ್ತು. ಇನ್ನು ಮುಂದೆ ಯಾವುದೇ ರಿಯಾಯಿತಿ ಇರುವುದಿಲ್ಲ. ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂದು ಹೇಳಿದರು.
ಕಳೆದ 6 ದಿನಗಳಿಂದ ಜಿಲ್ಲೆಯ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಅಲ್ಲಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದೆಂದು ಹೇಳಿದರು.
ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಪರಿಸರ ಬೆಳೆಸುವ ನಿಟ್ಟಿನಲ್ಲಿ ಗಿಡಮರಗಳನ್ನು ಹಾಕಬೇಕು. ಪ್ಲಾಸ್ಟಿಕ್ ಬಾಟಲ್‌ನಿಂದ ನೀರು ಕುಡಿಯದಂತೆ ಸೂಚನೆ ನೀಡಲಾಗಿದೆ. ಕಾಗದದ ಬಳಕೆಯನ್ನು ಸಮರ್ಪಕವಾಗಿ ಬಳಕೆ ಮಾಡಬೇಕು ಎಂಬುದು ಅಧಿಕಾರಿಗಳಿಗೆ ಸಲಹೆ ನೀಡಲಾಗಿದೆ. ಪರಿಸರ ಬೆಳೆಸಲು ಹೆಚ್ಚು ಒತ್ತು ನೀಡಲಾಗಿದೆ. ಪ್ರತಿ ಸೋಮವಾರ ಎಸಿ ರಹಿತ ದಿನವನ್ನಾಗಿಸಿ ಅಂದು ಹವಾ ನಿಯಂತ್ರಣ ಬಳಕೆ ಮಾಡದೇ ಸೇವೆ ಸಲ್ಲಿಸಲಾಗುತ್ತದೆ. ಮತ್ತು ಪ್ರತಿ ತಿಂಗಳು ಪ್ರತಿ ಮಂಗಳವಾರ ಪೋನ್ ಇನ್ ಕಾರ್ಯಕ್ರಮ ಹಮ್ಮಿಕೊಂಡು ಜನರ ಕುಂದು ಕೊರತೆಗಳನ್ನು ನಿವಾರಿಸಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳಾದ ವೆಸ್ಟ್ ಸಿಪಿಐ ಉಮೇಶ, ಸದಾರ್ ಬಜಾರ್ ಠಾಣೆಯ ಪಿಎಸ್‌ಐ ಉಮೇಶ ಕಾಂಬ್ಳೆ, ಸಿಬ್ಬಂದಿ ವರ್ಗವು ಉಪಸ್ಥಿತರಿದ್ದರು.

Leave a Comment