ಮನೆಗೊಂದು ಮರ, ಊರಗೊಂದು ತೋಪು ; ಹಸಿರು ಕರ್ನಾಟಕ ಯೋಜನೆಗೆ ಚಾಲನೆ

ಮೈಸೂರು, ಆ.15. ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಮಳೆ ನೀರನ್ನು ಭೂಮಿಯಲ್ಲಿ ಇಂಗಿಸಿ ಅಂತರ್ಜಲವನ್ನು ಹೆಚ್ಚಿಸಿ ನೀರಿನ ಲಭ್ಯತೆಯನ್ನು ವೃದ್ಧಿಸುವ ಉದ್ದೇಶದಿಂದ 2018-19ನೇ ಸಾಲಿನ ಜುಲೈನಲ್ಲಿ ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದ ಹಸಿರು ಕರ್ನಾಟಕ ಯೋಜನೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಾಲನೆ ದೊರೆಯಿತು.
ಮನೆಗೊಂದು ಮರ, ಊರಿಗೊಂದು ತೋಪು, ತಾಲ್ಲೂಕಿಗೊಂದು ಕಿರು ಅರಣ್ಯ, ಜಿಲ್ಲೆಗೊಂದು ವನ ಎಂಬ ಧ್ಯೇಯ ವಾಕ್ಯದೊಂದಿಗೆ ಮೈಸೂರಿನ ಪಂಜಿನ ಕವಾಯತು ಮೈದಾನದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಗಿಡಗಳಿಗೆ ನೀರೆರೆದು, ತ್ರಿವರ್ಣ ಧ್ವಜ ಬಣ್ಣದ ಬಲೂನ್ ಗಳನ್ನು ಹಾರಿ ಬಿಡುವುದರ ಮೂಲಕ ಹಸಿರು ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಹಸಿರು ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯುವುದಕ್ಕೂ ಮುನ್ನ ಸ್ವಾತಂತ್ರ ದಿನಾಚರಣೆಯ ಆಕರ್ಷಕ ಪಥ ಸಂಚಲನದಲ್ಲಿ ಮೈಸೂರು ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಅರಣ್ಯ ಇಲಾಖೆಯ ಒಂದು ಪುರುಷ ಮತ್ತು ಒಂದು ಮಹಿಳಾ ಅಧಿಕಾರಿಗಳ ತುಕಡಿಗಳು ಭಾಗವಹಿಸಿ, ಗಮನ ಸೆಳೆದವು.
ಮೈಸೂರಿನ ರೋಟರಿ ಬೃಂದಾವನ ಶಾಲೆಯ 400 ಮಕ್ಕಳು ಪರಿಸರ ಗೀತೆಗೆ, ಸಾಮೂಹಿಕ ನೃತ್ಯ ಪ್ರದರ್ಶಿಸಿದರು.

Leave a Comment