ಮನೆಮನೆಗೆ ಕುಮಾರಣ್ಣ ಕಾರ್ಯಕ್ರಮಕ್ಕೆ ಜನರಿಂದ ಸ್ಪಂದನೆ

ದಾವಣಗೆರೆ.ಏ.16; ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮನೆಮನೆ ಕುಮಾರಣ್ಣ ಕಾರ್ಯಕ್ರಮ ಸಂಪೂರ್ಣವಾಗಿ ಯಶಸ್ವಿಯಾಗಿದೆ ಎಂದು ಜಿಲ್ಲಾ ಜೆಡಿಎಸ್ ನ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಜೆ.ಅಮಾನುಲ್ಲಾಖಾನ್ ಹೇಳಿದರು.
ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ವತಿಯಿಂದ ಏಪ್ರಿಲ್ 9 ರಿಂದ ನಿರಂತರವಾಗಿ ಇಂದಿನವರೆಗೂ ಕ್ಷೇತ್ರಾದ್ಯಂತ ಮನೆ ಮನೆ ಕುಮಾರಣ್ಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮತದಾರರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದರು. ದಾವಣಗೆರೆ 8 ಕ್ಷೇತ್ರಗಳಲ್ಲಿ 7 ಕಾಂಗ್ರೆಸ್ ಕ್ಷೇತ್ರ ಅಧಿಕಾರದಲ್ಲಿದ್ದರೆ 1 ರಲ್ಲಿ ಜೆಡಿಎಸ್ ಅಧಿಕಾರದಲ್ಲಿದೆ. ಕಾಂಗ್ರೆಸ್ 5 ವರ್ಷ ಆಡಳಿತ ನಡೆಸಿದ್ದಾರೆ.ಸಾಕಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಸಮಸ್ಯೆಗೆ ಬೇಕಾದ ಶಾಶ್ವತ ಯೋಜನೆಗಳನ್ನು ಜಾರಿಗೊಳಿಸಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ದಕ್ಷಿಣ ಭಾಗದಲ್ಲಿ ಸುಸಜ್ಜಿತವಾದ ಆಸ್ಪತ್ರೆ, ಪದವಿಪೂರ್ವ ಕಾಲೇಜು, ಸೇರಿದಂತೆ ಯಾವುದೇ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡಿಲ್ಲ. ದಕ್ಷಿಣ ವಿಧಾನಸಭಾ ಕ್ಷೇತ್ರ ಅಭಿವೃದ್ದಿಯಲ್ಲಿ ಮಲತಾಯಿ ಧೋರಣೆಯನ್ನು ಕಂಡಿದೆ. ಮಂಡಕ್ಕಿಭಟ್ಟಿ ಅಭಿವೃದ್ದಿಗೆ ಸಾಕಷ್ಟು ಅನುದಾನ ಬಂದರು ಸಹ ಅದು ಅಭಿವೃದ್ದಿಯಾಗಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಕಾರ್ಯದರ್ಶಿ ಟಿ.ಅಜ್ಗರ್ ಮಾತನಾಡಿ, ಜೆ.ಅಮಾನುಲ್ಲಾಖಾನ್ ಅವರು ಪಕ್ಷಕ್ಕಾಗಿ ಸುಮಾರು ವರ್ಷಗಳಿಂದ ದುಡಿದಿದ್ದಾರೆ. ಅವರಿಗೆ ಟಿಕೇಟ್ ನೀಡಲಾಗುವುದು. ಈ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ. ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮ ಸಂಪೂರ್ಣವಾಗಿ ಯಶಸ್ವಿಯಾಗಿದೆ. ಈ ಬಾರಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಪಾಪಣ್ಣ, ಖಾದರ್ ಬಾಷಾ. ವಿನಾಯಕ್, ಶ್ರೀನಿವಾಸ್, ಹಸನ್ ಸಾಬ್, ಅಕ್ಬರ್, ಹನುಮಂತಪ್ಪ ರೆಡ್ಡಿ, ಸಬೀರ್ ಬಾಷಾ, ಮಹಮದ್, ಜಗದೀಶ್ ಕುಕ್ಕವಾಡ ಸೇರಿದಂತೆ ಮತ್ತಿತರರಿದ್ದರು.

Leave a Comment