ಮನೆಯಲ್ಲಿ ವೇಶ್ಯಾವಾಟಿಕೆ: ಮೂವರು ಆರೋಪಿಗಳ ಸೆರೆ

ಪುತ್ತೂರು, ಸೆ.೧೨- ಪುತ್ತೂರು ತಾಲೂಕಿನ ಗ್ರಾಮಾಂತರ ಪ್ರದೇಶವಾದ ಅರಿಯಡ್ಕ ಗ್ರಾಮದ ಒಳ್ಳಿಕಾನ ಎಂಬಲ್ಲಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆಯ ಆರೋಪದಲ್ಲಿ ಸಂಪ್ಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅರಿಯಡ್ಕ ಗ್ರಾಮದ ಬಳ್ಳಿಕಾನ ಎಂಬಲ್ಲಿರುವ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಕುರಿತು ಲಭಿಸಿದ ಖಚಿತ ಮಾಹಿತಿಯ ಆಧಾರದಲ್ಲಿ ಸಂಪ್ಯ ಠಾಣಾ ಎಸ್‌ಐ ಸಕ್ತಿವೇಲು ನೇತೃತ್ವದ ಪೊಲೀಸರು ಬುಧವಾರ ದಾಳಿ ಕಾರ್ಯಾಚರಣೆ ನಡೆಸಿ, ವೇಶ್ಯಾವಾಟಿಕೆ ದಂಧೆಯಲ್ಲಿ ಭಾಗಿಯಾಗಿದ್ದ ಚರಣ್ ಮತ್ತು ಅರುಣ್ ಹಾಗೂ ಮನೆ ಮಾಲಿಕ ನಾರಾಯಣ ನಾಯ್ಕ ಎಂಬವರನ್ನು ಬಂಧಿಸಿದ್ದಾರೆ. ಆರೋಪಿಗಳು ಯುವತಿಯೊಬ್ಬಳನ್ನು ಕರೆದುಕೊಂಡು ಬಂದು ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರೆಂದು ತಿಳಿದು ಬಂದಿದೆ. ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Comment