ಮನೆಯಲ್ಲೇ ಈದುಲ್ ಫಿತ್ರ್ ನಮಾಝ್ ‌ಆಚರಣೆ

ಮೈಸೂರು. ಮೇ.25- ಮುಸ್ಲಿಮರ ಪವಿತ್ರ ಹಬ್ಬವಾದ ಈದುಲ್ ಫಿತ್ರ್ (ರಂಜಾನ್) ಹಬ್ಬದ ವಿಶೇಷ ಪ್ರಾರ್ಥನೆಯನ್ನು ಲಾಕ್ ಡೌನ್ ಹಿನ್ನಲೆಯಲ್ಲಿ ಮುಸ್ಲಿಂ ಬಾಂಧವರು ತಮ್ಮ ಮನೆಗಳಲ್ಲಿ ಇಂದು ಆಚರಿಸಿದರು.
ಮುಸ್ಲಿಮರ ಪವಿತ್ರ ಹಬ್ಬವಾದ ಈದುಲ್ ಫಿತ್ರ್ ( ರಂಜಾನ್ ) ಹಬ್ಬದ ವಿಶೇಷ ಪ್ರಾರ್ಥನೆಯನ್ನು ಲಾಕ್ ಡೌನ್ ಹಿನ್ನಲೆಯಲ್ಲಿ ಮನೆಗಳಲ್ಲೇ ಆಚರಿಸಲಾಯಿತು.
ಈದ್ ನಮಾಜ್ ನ್ನು ವಿಶೇಷವಾಗಿ ಈದ್ಗಾ ಮೈದಾನದಲ್ಲಿ ಅಥವಾ ಮಸೀದಿಗಳಲ್ಲಿ ಆಚರಿಸುವ‌ ಸಂಪ್ರದಾಯವಿದ್ದು, ಲಾಕ್ ಡೌನ್ ಕಾರಣ ಇದಕ್ಕೆ ಅವಕಾಶವಿರಲಿಲ್ಲ. ಈ ಕಾರಣದಿಂದ ಮುಸಲ್ಮಾನ ಬಾಂಧವರು ‌ತಮ್ಮ ತಮ್ಮ ಮನೆಗಳಲ್ಲಿ ಈದ್ ನಮಾಜ್ ಆಚರಿಸಿದರು.
ಗೆಳೆಯರು, ಬಂಧು ಬಾಂಧವರ ಜತೆ ಈದ್ಗಾ ಮೈದಾನದಲ್ಲಿ ಸಂಭ್ರಮದಿಂದ ನಮಾಜ್ ಆಚರಿಸುವ ಮುಸಲ್ಮಾನರಿಗೆ ಈ ಬಾರಿ ಇಂತಹ ಅವಕಾಶ ದೊರೆಯಲಿಲ್ಲ. ಇದರಿಂದ ಸಂಭ್ರಮದ ಕೊರತೆ ಎದ್ದು ಕಾಣುತ್ತಿತ್ತು. ಆದಾಗ್ಯೂ ಮನೆಗಳಲ್ಲಿ ನಮಾಜ್ ಆಚರಿಸಿ ಕುಟುಂಬದವರ ಜತೆ ಸಂತಸ ಹಂಚಿಕೊಂಡರು.
@12bc = ಖಬರ ಸ್ತಾನ್ ಪ್ರವೇಶಕ್ಕೆ ನಿರ್ಬಂಧ
ಈದುಲ್ ಫಿತ್ರ್ ನಮಾಜ್ ಬಳಿಕ ಮುಸಲ್ಮಾನರು ಈದ್ಗಾ ಅಥವಾ ಮಸೀದಿಯಿಂದ ನೇರವಾಗಿ ಖಬರಸ್ತಾನ್ (ಸ್ಮಶಾನ) ಗೆ ಆಗಮಿಸಿ ಮೃತ ಪಟ್ಟಿರುವ ತಮ್ಮ ಬಂಧು ಬಾಂಧವರ ಸಮಾಧಿ ಬಳಿ ಪ್ರಾರ್ಥನೆ ನಡೆಸುವುದು ವಾಡಿಕೆ. ಆದರೆ ಪೊಲೀಸರು ಇದಕ್ಕೆ ಅವಕಾಶ ನೀಡಲಿಲ್ಲ.
ಟಿಪ್ಪು ಸರ್ಕಲ್ ಬಳಿಯ ಬಡಾ ಮಕಾನ್ ಸೇರಿದಂತೆ ನಗರದ ಬಹುತೇಕ ಮುಸ್ಲಿಂ ಸ್ಮಶಾನದ ಬಳಿ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು. ಬಹುತೇಕ ಮುಸಲ್ಮಾನರು ಸ್ಮಶಾನದ ಬಳಿ ಆಗಮಿಸಿ ಪೊಲೀಸರನ್ನು ಕಂಡು ದೂರದಿಂದಲೇ ಸ್ಮಶಾನಕ್ಕೆ ನಮಿಸಿ ಹಿಂತಿರುಗಿದ್ದು ಕಂಡು ಬಂತು.
ನಮಾಜ್ ವೇಳೆ‌ ಸಾಮಾಜಿಕ ಅಂತರ ಕಾಯ್ದುಕೊಂಡಿದ್ದು ಕಂಡು ಬಂತು. ಪ್ರಾರ್ಥನೆಯಲ್ಲಿ ಕೋವಿಡ್ 19 ಮಹಾಮಾರಿ ಜಗತ್ತಿನಿಂದ ದೂರ ಹೋಗುವಂತೆ ಪ್ರಾರ್ಥಿಸಲಾಯಿತು.

Share

Leave a Comment