ಮರಕ್ಕೆ ಬೈಕ್ ಡಿಕ್ಕಿ: ವ್ಯಕ್ತಿ ಸಾವು

ಮಧುಗಿರಿ, ಮಾ. ೨೦ – ದ್ವಿಚಕ್ರ ವಾಹನವೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ದೊಡ್ಡೇರಿ ಗ್ರಾಮದ ಸಮೀಪ ನಡೆದಿದೆ.

ಮೃತರನ್ನು ಸಿರಾ ತಾಲ್ಲೂಕಿನ ದೊಡ್ಡ ಅಗ್ರಹಾರದ ಮಹಾಲಿಂಗಯ್ಯ (56) ಎಂದು ಗುರುತಿಸಲಾಗಿದೆ. ಮಧುಗಿರಿಯಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಈ ಸಂಬಂಧ ತಾಲ್ಲೂಕಿನ ಬಡವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Comment