ಮಹದಾಯಿ ಬೇಡಿಕೆ, ನರಗುಂದ ಬಂದ್ ಯಶಸ್ವಿ

ನರಗುಂದ, ಜು 18- ನ್ಯಾಯಾಲಯದ ಮಧ್ಯಂತರ ತೀರ್ಪಿನಂತೆ ಕೂಡಲೇ ಮಹದಾಯಿ ಯೋಜನಾ ಪ್ರದೇಶಗಳಿಗೆ ಕೂಡಲೇ ನೀರು ಹರಿಸುವಂತೆ ರೈತ ಸೇನೆ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿದ್ದ ನರಗುಂದ ಬಂದ್ ಸಂಪೂರ್ಣ ಯಶಸ್ವಿಯಾಯಿತು.
ಪಟ್ಟಣದ ವ್ಯಾಪಾರಸ್ಥರು ತಮ್ಮ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿ ಬಂದ್ ಕರೆಗೆ ಬೆಂಬಲ ವ್ಯಕ್ತಪಡಿಸಿದರು. ಮುಂಜಾನೆಯಿಂದಲೇ ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ಶಾಲಾ ಕಾಲೇಜುಗಳಿಗೂ ಸಹಿತ ಅನಿವಾರ್ಯವಾಗಿ ರಜೆ ಘೋಷಿಸಲಾಯಿತು.
ರೈತ ಸೇನೆ ಹಾಗೂ ವಿವಿಧ ಸಂಘಟನೆಗಳು ಮಹದಾಯಿ ಹೋರಾಟ ವೇದಿಕೆಯಿಂದ ಬೃಹತ್ ಸಂಖ್ಯೆಯಲ್ಲಿ ಮಹದಾಯಿ ಪರ ಘೋಷಣೆಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹುಬ್ಬಳ್ಳಿ ವಿಜಯಪುರ ರಸ್ತೆಯ ಶಿವಾಜಿ ವೃತ್ತದಲ್ಲಿ ರಸ್ತಾ ರೋಕೋ ನಡೆಸಿದರು.
ಹೋರಾಟದ ನೇತೃತ್ವ ವಹಿಸಿದ್ದ ರಾಜ್ಯ ರೈತ ಸೇನೆ ಅಧ್ಯಕ್ಷ ವೀರೇಶ ಸೊಬರದಮಠ ಸ್ವಾಮಿಜಿ ಸಮ್ಮುಖದಲ್ಲಿ ನ್ಯಾಯಾಧೀಕರಣ ನೀಡಿರುವ ತೀರ್ಪನ್ನು ಕೂಡಲೇ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ನೀಡುವ ಮಹತ್ವದ ನಿರ್ಣಯ ತೆಗೆದುಕೊಳ್ಳಲಾಯಿತು.
ಮಹಿಳಾ ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ಹಸಿರು ಸೀರೆಯನ್ನು ಧರಿಸುವ ಮೂಲಕ ಪ್ರತಿಭಟನೆಗೆ ಇಳಿದಿದ್ದು ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ಹೋರಾಟ ವೇದಿಕೆಯ ಮುಖಂಡರಾದ ಈರಬಸಪ್ಪ ಹೂಗಾರ, ಶೇಷಣ್ಣ ಗುಡಿಸಾಗರ, ಪ್ರಕಾಶ

Leave a Comment