ಮಹದಾಯಿ ಸದ್ಯದಲ್ಲಿ ಸರ್ವ ಪಕ್ಷಗಳ ಸಭೆ

ಬೆಂಗಳೂರು, ಸ. ೧೪- ಮಹದಾಯಿ ತೀರ್ಪಿಗೆ ಸಂಬಂಧಿಸಿದಂತೆ ಸದ್ಯದಲ್ಲೇ ಸರ್ವಪಕ್ಷಗಳ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದಿಲ್ಲಿ ಹೇಳಿದ್ದಾರೆ.

ತಮ್ಮ ಗೃಹ ಕಛೇರಿ ಕೃಷ್ಣಾದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ತೀರ್ಪಿಗೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ ನೀರಾವರಿ ತಜ್ಞರು ಮತ್ತು ಕಾನೂನು ತಜ್ಞರ ಸಭೆ ಕರೆದಿದ್ದೇನೆ. ಅಲ್ಲಿ ತೀರ್ಪಿನ ಸಾಧಕ ಬಾಧಕಗಳನ್ನು ಚರ್ಚಿಸಿ ಆ ನಂತರ ಸರ್ವ ಪಕ್ಷಗಳ ಸಭೆ ಕರೆಯಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಕೇಂದ್ರ ತಂಡ ಸಭೆ

ರಾಜ್ಯದಲ್ಲಿ ಆಗಿರುವ ಅತಿವೃಷ್ಠಿ ಹಾನಿಯ ಬಗ್ಗೆ ಅಧ್ಯಯನ ನಡೆಸಲು ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರದ ಅಧ್ಯಯನ ತಂಡದ ಜತೆ ಇಂದು ಸಭೆ ಇದೆ. ಅದಕ್ಕೂ ಮೊದಲು ಆ ರಾಜ್ಯದ ಅಧಿಕಾರಿಗಳ ಜತೆ ಸಭೆ ನಡೆಸುತ್ತಿದ್ದೇನೆ ಎಂದು ಅವರು ಹೇಳಿದರು.

ರಾಜನಾಥ್‌ಸಿಂಗ್ ನಗ‌ರಕ್ಕೆ

ಕೇಂದ್ರದ ಗೃಹ ಸಚಿವ ರಾಜನಾಥ್‌ಸಿಂಗ್ ಇದೇ ತಿಂಗಳ 18 ರಂದು ನಗರಕ್ಕೆ ಭೇಟಿ ನೀಡಲಿದ್ದು, ನಗರದಲ್ಲಿ ನಡೆಯುವ ದಕ್ಷಿಣ ಭಾರತದ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

Leave a Comment