ಮಹಾನಗರ ಪಾಲಿಕೆ ಚುನಾವಣೆ ; ಕೃಷ್ಣರಾಜ ಕ್ಷೇತ್ರದ ಆಕಾಂಕ್ಷಿಗಳ ಸಭೆ- ಗೆಲ್ಲಲು ರಾಮದಾಸ್ ಮಾಸ್ಟರ್ ಪ್ಲಾನ್

ಮೈಸೂರು, ಆ.14- ಮೈಸೂರು ಮಹಾನಗರ ಪಾಲಿಕೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ದಿನೇ ದಿನೇ ಕಾವೇರುತ್ತಿದೆ. ಮೂರೂ ಪಕ್ಷಗಳಲ್ಲಿ ಆಕಾಂಕ್ಷಿಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದಿಗ್ವಿಜಯ ಸಾಧಿಸಲು ಶಾಸಕ ಎಸ್.ಎ. ರಾಮದಾಸ್ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಟಾರ್ಗೆಟ್ 20 ಎಂಬ ಹೆಸರಿನಲ್ಲಿ ಚುನಾವಣಾ ತಂತ್ರಗಳನ್ನು ರೂಪಿಸುತ್ತಿದ್ದಾರೆ.
ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 20 ವಾರ್ಡುಗಳಿದ್ದು, ಆ ಎಲ್ಲ 20 ವಾರ್ಡುಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವಂತೆ ಚುನಾವಣಾ ಕಾರ್ಯತಂತ್ರಗಳನ್ನು ಪರಿಣಾಮಕಾರಿಯಾಗಿ ರೂಪಿಸುತ್ತಿದ್ದಾರೆ. ಇದಕ್ಕಾಗಿಯೇ ಮಂಗಳವಾರ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಚುನಾವಣಾ ಪೂರ್ವ ತಯಾರಿ ಸಭೆ ನಡೆಸಿದರು. ಸಭೆಯಲ್ಲಿ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಮುಖಂಡರು, ಹಾಲಿ ಪಾಲಿಕೆ ಸದಸ್ಯರು ಹಾಗೂ ಪಕ್ಷದ ತಳಮಟ್ಟದ ಕಾರ್ಯಕರ್ತರು ಭಾಗವಹಿಸಿದ್ದರು. ಈ ಸಭೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ದಂಡೇ ಮೆರೆದಿತ್ತು.
ಗೆಲ್ಲುವ ಅಭ್ಯರ್ಥಿಗೇ ಟಿಕೆಟ್
ಕೃಷ್ಣರಾಜ ಕ್ಷೇತ್ರವೊಂದರಲ್ಲಿಯೇ 20 ಕ್ಷೇತ್ರಗಳಲ್ಲಿ ಟಿಕೆಟ್ ಬಯಸಿ ಸರ್ಜಿ ಸಲ್ಲಿಸಿರುವವರ ಸಂಖ್ಯೆ ನೂರರ ಗಡಿ ದಾಟಿದೆ. ಈ ಹಿನ್ನೆಲೆಯಲ್ಲಿ ಗೆಲ್ಲುವ ಸಾಮಥ್ಯವಿರುವ ಅಭ್ಯರ್ಥಿಗಳ ಹುಡುಕಾಟ ಜೋರಾಗಿ ನಡೆದಿದೆ. ಏನೇ ಆದರೂ ಗೆಲ್ಲುವ ಸಾಮಥ್ರ್ಯವಿರುವ ಅಭ್ಯರ್ಥಿಗೇ ಟಿಕೆಟ್ ಸಿಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

Leave a Comment