ಮಹಿಳಾ ಮಣಿಗೆ ಸಚಿವ ಮುಕುಟ ಪುಷ್ಪಾ ವಿಶ್ವಾಸ

ಮೈಸೂರು, ಡಿ. ೬- ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳಾ ಶಾಸಕಿರೊಬ್ಬರಿಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮರ್‌ನಾಥ್ ಹೇಳಿದರು.
ಸಚಿವ ಸಂಪುಟ ವಿಸ್ತರಣೆಯ ರೇಸ್‌ನಲ್ಲಿ ನಾಲ್ಕೈದು ಮಹಿಳಾ ಶಾಸಕಿಯರು ಇದ್ದು, ಅವರಲ್ಲಿ ಒಬ್ಬರಿಗೆ ಸಚಿವ ಸ್ಥಾನ ಸಿಗುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಸಚಿವ ಸಂಪುಟ ವಿಸ್ತರಣೆಯಲ್ಲಿ ಯಾವುದೇ ಮಹಿಳಾ ಶಾಸಕಿಯರಿಗೆ ಸಚಿವ ಸ್ಥಾನ ನೀಡಿದರೆ ಸಂತೋಷ ಎಂದ ಅವರು, ನಿಗಮ ಮಂಡಳಿಗಳ ನೇಮಕಾತಿ ಸಂದರ್ಭದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದೇನೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತ್ಯೇಕ ಪ್ರಣಾಳಿಕೆ
2019ರ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರಿಗಾಗಿಯೇ ಪ್ರತ್ಯೇಕ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗುವುದು, ಮಹಿಳೆಯರ ಧ್ವನಿಯನ್ನು ಪ್ರಣಾಳಿಕೆಯಲ್ಲಿ ಅಳವಡಿಸುತ್ತೇವೆ. ಈ ಪ್ರಣಾಳಿಕೆ ಸಂಬಂಧ ನಾಳೆ ಮೈಸೂರಿನಲ್ಲಿ ಮಹಿಳೆಯರೊಂದಿಗೆ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ ಎಂದು ಅವರು ಹೇಳಿದರು.
ನಾಳಿನ ಈ ಮಹಿಳಾ ಧ್ವನಿ ಸಭೆಯಲ್ಲಿ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಸುಷ್ಮಿತಾದೇವ್ ಸಹ ಪಾಲ್ಗೊಳ್ಳಲಿದ್ದಾರೆ ಎಂದರು.

Leave a Comment