ಮಹಿಳಾ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

ಕೊಳಗಲ್ಲು, ಜ.8: ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಸಿದ್ದಮ್ಮನಹಳ್ಳಿ ಪಾಂಡುರಂಗ ದೇವಸ್ಥಾನ, ಆಂಜನೇಯಸ್ವಾಮಿ ದೇವಸ್ಥಾನ ಹಾಗೂ ಕುಡುತಿನಿಯಲ್ಲಿ ನಿತ್ಯಾನಂದ ಮಠದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ನೂರೈವತ್ತು ಸ್ವಸಹಾಯ ಸಂಘದ ಮಹಿಳೆಯರು ಭಾಗವಹಿಸಿ ಯಶಸ್ವಿಗೊಳಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿ ನಿರಂಜನ್ ಅವರು ಭೇಟಿ ನೀಡಿ ಪರಿಶೀಲಿಸಿದರು.

ಕಾರ್ಯಕ್ರಮದಲ್ಲಿ ಮೇಲ್ವಿಚಾರಕರಾದ ಕೊಟ್ರೇಶ್, ಸೇವಾ ಪ್ರತಿನಿಧಿಗಳಾದ ಶೇಖಮ್ಮ, ನಾಗರತ್ನ, ರೇಣುಕಾ ಹಾಗೂ ಒಕ್ಕೂಟದ ಅಧ್ಯಕ್ಷರು, ಸದಸ್ಯರು ಕಾರ್ಯಕ್ರಮವನ್ನು ಮಾಡುವಲ್ಲಿ ಸಹಕರಿಸಿದರು.

Leave a Comment