ಮಹಿಳೆಗೆ ಕಾರು ಡಿಕ್ಕಿ : ಮಹಿಳೆ ಸಾವು

ಪಿರಿಯಾಪಟ್ಟಣ: ಏ.6- ರಸ್ತೆ ಬದಿ ಕುಳಿತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ ಭಾನುವಾರ ಜರುಗಿದೆ.
ಕೋಮಲಾಪುರ ಗ್ರಾಮದ ಹನುಮಮ್ಮ(53) ಮೃತ ಮಹಿಳೆ, ಅಪಘಾತದ ನಂತರ ಕಾರಿನಲ್ಲಿದ್ದವರು ಸ್ಥಳದಲ್ಲಿ ವಾಹನ ಬಿಟ್ಟು ಪರಾರಿಯಾಗಿದ್ದಾರೆ, ಈ ಸಂಬಂಧ ಮೃತರ ಪುತ್ರ ಉತ್ತರಕುಮಾರ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಘಟನಾ ಸ್ಥಳಕ್ಕೆ ಸಬ್ ಇನ್ಸ್ಪೆಕ್ಟರ್ ಗಣೇಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿ ಡಿಕ್ಕಿ ಹೊಡೆದ ವಾಹನವನ್ನು ವಶಪಡಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Leave a Comment