ಮಾಜಿ ಸಚಿವರಿಂದ ಪೊಲೀಸರ ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯ ಆರೋಗ್ಯ ವಿಚಾರಣೆ

ತುಮಕೂರು, ಆ. ೬- ನಗರದ ಹೊರವಲಯದ ಊರುಕೆರೆ ಬಳಿ ಇರುವ ಜಿಲ್ಲಾ ಕಾರಾಗೃಹಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ ಹಾಗೂ ವಿಶ್ವ ಮಾನವ ಹಕ್ಕುಗಳ ಹೋರಾಟಗಾರ ಸಿದ್ದಲಿಂಗೇಗೌಡ ಭೇಟಿ ನೀಡಿ ಹುಲಿಯೂರುದುರ್ಗ ಪೋಲಿಸರಿಂದ ದೌರ್ಜನ್ಯಕ್ಕೆ ಒಳಗಾಗಿದ್ದ ವ್ಯಕ್ತಿಯ ಆರೋಗ್ಯವನ್ನು ವಿಚಾರಿಸಿದರು.

ಕ್ಷುಲ್ಲಕ ಕಾರಣಕ್ಕೆ ಪೊಲೀಸರು ಮಾರಾಣಾಂತಿಕ ಹಲ್ಲೆ ನಡೆಸಿದ್ದರಿಂದ ಗಾಯಾಳು ದೇಹದ ಕೆಲ ಭಾಗದಲ್ಲಿ ರಕ್ತ ಹೆಪ್ಪುಗಟ್ಟಿದ್ದು, ನ್ಯಾಯಾಧೀಶರ ಸೂಚನೆ ಮೇರೆಗೆ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಆಸ್ಪತ್ರೆಗೆ ದಾಖಲಿಸದೆ ಗಾಯಾಳು ಪದ್ಮನಾಭನನ್ನು ಜಿಲ್ಲಾ ಕಾರಗೃಹಕ್ಕೆ ಕೊಂಡೊಯ್ಯಲಾಗಿದೆ.

ಈ ಬಗ್ಗೆ ಮಾಹಿತಿ ಪಡೆದ ಮಾಜಿ ಸಚಿವ ಸೊಗಡು ಶಿವಣ್ಣ ಹಾಗೂ ವಿಶ್ವ ಮಾನವ ಹಕ್ಕುಗಳ ಹೋರಾಟಗಾರ ಸಿದ್ದಲಿಂಗೇಗೌಡ ಅವರು ಜೈಲಿಗೆ ತೆರಳಿ ಪೊಲೀಸರು ಹಾಗೂ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿ ಪದ್ಮನಾಭರವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಕಳುಹಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

Leave a Comment