ಮಾದಕ ವಸ್ತುಗಳ ಬೆಲೆ ಗಗನಕ್ಕೆ – ಕ್ರಮಕ್ಕೆ ಒತ್ತಾಯ

ಬಿಸಿಯೂಟ ಸಿಬ್ಬಂದಿಗಳಿಗೆ ವೇತನ ಹೆಚ್ಚಳ
ರಾಯಚೂರು.ಮೇ.23- ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸಂಬಂಧಿಸಿ ಕ್ವಾರೆಂಟೈನ್ ಕೇಂದ್ರಗಳಲ್ಲಿ ಶಾಲಾ ಅಡುಗೆ ಸಿಬ್ಬಂದಿಯಿಂದ ಆಹಾರ ನೀಡುವ ಹಾಗೂ ಕರ್ತವ್ಯ ನಿರ್ವಹಿಸುವ ಕಾರ್ಮಿಕರಿಗೆ ಹೆಚ್ಚಿನ ಆಹಾರ ಕಿಟ್ ವಿತರಿಸಿ ಹಾಗೂ ಜಿಲ್ಲೆಯಾದ್ಯಾಂತ ದುಬಾರಿದರಲ್ಲಿ ಮಾದಕವಸ್ತುಗಳನ್ನು ಶೇ. 50 ರಷ್ಟು ಹೆಚ್ಚಿನ ಬೆಲೆಗೆ ಮಾರುತಿರುವರು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಟ್ರೆಂಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ ಮತ್ತು ಕರ್ನಾಟಕ ಬಿಸಿಯೂಟ ಕಾರ್ಮಿಕರ ಸಂಘ ಜಿಲ್ಲಾ ಘಟಕವತಿಯಿಂದ ಜಿಲ್ಲಾಧಿಕಾರಿಗಳ ಸ್ಥಾನಿಕ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.
ಕೋವಿಡ್-19 ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಆದೇಶದಂತೆ ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಗಮಿಸಿದ ಸೋಂಕಿತರಿಗೆ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದ್ದು ಆದ ಕಾರಣ ಇವರನ್ನು ವಸತಿ ಗೃಹಗಳಲ್ಲಿ ಕ್ವಾರಂಟೈನ್ ಮಾಡಲಾಗಿದೆ.
ಇವರಿಗೆ ಆಹಾರ ಒದಗಿಸಲು ತಾಲೂಕಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಖಾಂತರ ಬಿಸಿ ಊಟದ ಕಾರ್ಮಿಕರನ್ನು ಬಳಸಿಕೊಳ್ಳಲಾಗುತ್ತಿದೆ.
ಲಾಕ್‌ಡೌನ್ ಸಂದರ್ಭದಲ್ಲಿ ಆಗಲಿರುಳು ಎನ್ನೆದೆ ದುಡಿಯುತ್ತಿರುವ ಕಾರ್ಮಿಕರಿಗೆ ಜಿಲ್ಲಾಡಳಿತವು ವೇತವನ್ನು ಹೆಚ್ಚಳ ಮಾಡಿ ಹಾಗೂ ಜಿಲ್ಲೆಯಾದ್ಯಂತ ಲಾಕ್‌ಡೌನ್ ಸಂದರ್ಭದಲ್ಲಿ ರಾಜಾ ರೋಷವಾಗಿ ಗುಟ್ಕಾ, ತಂಬಾಕು, ಸಿಗರೇಟ್ ಸೇರಿದಂತೆ ಇನ್ನಿತರ ಮಾದಕ ವಸ್ತುಗಳನ್ನು ಮಾರುಕಟ್ಟೆಯಲ್ಲಿ ಶೇ. 50 ರಷ್ಟು ಹೆಚ್ಚಿನ ದರದಲ್ಲಿ ಮಾರಲಾಗುತ್ತಿದ್ದು ಕೂಡಲೇ ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಜಿ. ಅಮರೇಶ, ರವಿ ದಾದಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Comment