ಮಾನವೀಯ ಮೌಲ್ಯಯುಳ್ಳ ಶಿಕ್ಷಣ ಅಗತ್ಯ

ಮಧುಗಿರಿ, ಜ. ೧೧- ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳನ್ನು ಕೇವಲ ಅಂಕಗಳಿಗೆ ಸೀಮಿತಗೊಳಿಸದೆ ಮಾನವೀಯ ಮೌಲ್ಯಗಳನ್ನೊಳಗೊಂಡ ಶಿಕ್ಷಣ ಕಲಿಸಲು ಪೋಷಕರು ಮತ್ತು ಶಿಕ್ಷಕರು ಮುತುವರ್ಜಿ ವಹಿಸಬೇಕೆಂದು ಶಾಸಕ ಕೆ.ಎನ್.ರಾಜಣ್ಣ ಕರೆ ನೀಡಿದರು.

ಕಸಬಾ ಡಿ.ವಿ.ಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವ ಮತ್ತು ಸೈಕಲ್ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನ ಸುಂದರವಾದುದು. ತಮ್ಮ ಜೀವನ ರೂಪಿಸಿಕೊಳ್ಳಲು ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಮಕ್ಕಳು ಸರ್ಕಾರದಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಗುಣಮಟ್ಟದ ಶಿಕ್ಷಣ ಕಲಿಯುವ ಮೂಲಕ ಉತ್ತಮ ಸತ್ಪ್ರಜೆಗಳಾಗುವ ನಿಟ್ಟಿನಲ್ಲಿ ಹೆತ್ತ ತಂದೆ-ತಾಯಿಗೆ ಅಕ್ಷರ ಕಲಿಸಿದ ಗುರು -ಹಿರಿಯರಿಗೆ  ಗೌರವ ತರಬೇಕು. ಈ ಶಾಲೆಗೆ ಸುಸಜ್ಜಿತ ರಂಗಮಂದಿರ ಮತ್ತು ಶೌಚಾಲಯ ನಿರ್ಮಾಣಕ್ಕೆ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಬಿಇಓ.ರಾಜಣ್ಣ, ತುಮುಲ್ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಟಿ.ರಾಮಣ್ಣ, ತಾ.ಪಂ.ಸದಸ್ಯ ರಾಮಣ್ಣ, ನಾಗಭೂಷಣ್, ಗ್ರಾ.ಪಂ.ಅಧ್ಯಕ್ಷ ನಾಗರಾಜು, ಮುಖಂಡರಾದ ಮೂಡ್ಲಪ್ಪ, ದೊಡ್ಡಯ್ಯ, ಹನುಮಂತರಾಜು, ಕೃಷ್ಣಮೂರ್ತಿ, ಕಾಮರಾಜ್, ಮುಖ್ಯ ಶಿಕ್ಷಕ ಕೆ.ಎನ್.ಹನುಮಂತರಾಯಪ್ಪ ಮತ್ತಿತರರು ಉಪಸ್ಥಿತರಿದ್ದರು.

Leave a Comment