ಮಾನ್ಪಡೆ, ನಸಲವಾಯಿ ಸೇರಿ 30ಕ್ಕೂ ಹೆಚ್ಚು ಜನರ ಬಂಧನ

ಕಲಬುರಗಿ,ನ.10-ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿ ಮೆರವಣಿಗೆ ನಡೆಸಲು ಮುಂದಾಗಿದ್ದ ಮಹಾನಗರ ಪಾಲಿಕೆ ಸದಸ್ಯ ಪರಶುರಾಮ ನಸಲವಾಯಿ, ಶರಣು ಸಲಗರ ಸೇರಿದಂತೆ 30ಕ್ಕೂ ಹೆಚ್ಚು ಜನರನ್ನು ಪೊಲೀಸರು ಇಂದು ಬಂಧಿಸಿದರು.
ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸಿ ಮೆರವಣಿಗೆ ನಡೆಸಲು ಮುಂದಾಗಿದ್ದ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಮಹಾನಗರ ಪಾಲಿಕೆ ಸದಸ್ಯ ಹಾಗೂ ಬಿಜೆಪಿ ಯುವ ಮೋರ್ಚಾ ಮುಖಂಡ ಪರಶುರಾಮ ನಸಲವಾಯಿ, ಶರಣು ಸಲಗರ ಸೇರಿದಂತೆ 30ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.
ಟಿಪ್ಪು ಜಯಂತಿಗೆ ಆಚರಣೆಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ 144 ಕಲಂ ಅನ್ವಯ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ್ದು, ನಿಷೇಧಾಜ್ಞೆ ಜಾರಿಗೊಳಿಸಿದ್ದರೂ ಅದನ್ನು ಉಲ್ಲಂಘಿಸಿ ಶಹಾಬಾದ ನಗರದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದ್ದ ಸಿಪಿಐ(ಎಂ) ಪಕ್ಷದ ಮುಖಂಡ ಮಾರುತಿ ಮಾನ್ಪಡೆ ಸೇರಿದಂತೆ ಮತ್ತಿತರರನ್ನು ಪೊಲೀಸರು ಬಂಧಿಸಿದರು.

Leave a Comment