ಮಾ.3-4 ತಾಲೂಕು 4ನೇ ಕಸಾಪ ಸಮ್ಮೇಳನ

 ಸ್ವಾಗತ ಸಮಿತಿ ಅಧ್ಯಕ್ಷರಾಗಿ ಶಾಸಕ ತಿಪ್ಪರಾಜು
ರಾಯಚೂರು.ಫೆ.13- ಮಾರ್ಚ್ 3 ಮತ್ತು 4 ರಂದು ತಾಲೂಕಿನ ಮಟಮಾರಿ ಗ್ರಾಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ 4ನೇ ಸಮ್ಮೇಳನ ಹಮ್ಮಿಕೊಳ್ಳಲಾಗಿದೆಂದು ತಾಲೂಕು ಕಸಾಪ ಅಧ್ಯಕ್ಷೆ ಗಿರೀಜಾ ಕೆ.ರಾಜಶೇಖರ ಹೇಳಿದರು.
ಅವರಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಮಟಮಾರಿ ಗ್ರಾಮದಲ್ಲಿ ನಡೆಯಲಿರುವ 4ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರನ್ನಾಗಿ ಗ್ರಾಮೀಣ ಕ್ಷೇತ್ರದ ಶಾಸಕ ತಿಪ್ಪರಾಜು ಹವಾಲ್ದಾರ್ ಅವರನ್ನು ನೇಮಕ ಮಾಡಲಾಗಿದೆ. ಕಳೆದ ವರ್ಷ ನಡೆದ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಜ.19, 20 ರಂದು ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದಲ್ಲಿ 9ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಿರ್ವಹಿಸಿದ ನಂತರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದೆಂದರು.
ಪ್ರಥಮ ಸಾಹಿತ್ಯ ಸಮ್ಮೇಳನ ದೇವಸೂಗೂರು, 2 ಮತ್ತು 3ನೇ ರಾಯಚೂರು ನಗರದಲ್ಲಿ ಆಯೋಜಿಸಲಾಗಿತ್ತು. ಇದೀಗ 4ನೇ ಸಾಹಿತ್ಯ ಸಮ್ಮೇಳನ ಮಟಮಾರಿ ಗ್ರಾಮದಲ್ಲಿ ಹಮ್ಮಿಕೊಳ್ಳುವ ಮೂಲಕ ಗ್ರಾಮೀಣ ಪ್ರದೇಶದ ಜನರಲ್ಲಿ ಕನ್ನಡ ಹಾಗೂ ಸಾಹಿತ್ಯಾಭಿಮಾನಿ ಬೆಳೆಸಲು ಪ್ರೇರಿಪಿಸಲಾಗುತ್ತಿದೆಂದರು. ಇದೇ ಪ್ರಪ್ರಥಮ ಬಾರಿಗೆ ಗ್ರಾಮೀಣ ಪ್ರದೇಶದಲ್ಲಿ ತಾಲೂಕು ಸಾಹಿತ್ಯ ಸಮ್ಮೇಳನ ಆಯೋಜಿಸಲು ನಿರ್ಧರಿಸಿರುವುದರಿಂದ ಆ ಭಾಗದ ಜನರು ಸಮ್ಮೇಳನ ಯಶಸ್ವಿಗೆ ಶ್ರಮಿಸಬೇಕೆಂದು ತಿಳಿಸಿದರು.
ಭೀಮನಗೌಡ ಇಟಗಿ, ಜೆ.ಎಲ್. ಈರಣ್ಣ, ಮಲ್ಲಿಕಾರ್ಜುನ, ಖಾಜಾ ಹುಸೇನ್, ಲಕ್ಷ್ಮೀ, ವೀಣಾ, ಉರುಕುಂದಪ್ಪ ನಾಯಕ, ರಾಮಣ್ಣ, ಚಂದ್ರಶೇಖರ, ಸುಬ್ಬರಾವ್ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Comment