ಮಿಕ್ಸಿಯಲ್ಲಿ ಕೆಜಿ ಚಿನ್ನ ಆರೋಪಿ ಸೆರೆ

ಮಂಗಳೂರು, ಮೇ ೧೬- ಮಿಕ್ಸಿಯ ಮೋಟಾರ್‌ನಲ್ಲಿ ಚಿನ್ನ ಅಡಗಿಸಿಟ್ಟು ದುಬೈನಿಂದ ಮಂಗಳೂರಿಗೆ ಸಾಗಾಟ ಮಾಡುತ್ತಿರುವುದನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ದುಬೈಯಿಂದ ಆಗಮಿಸಿದ ಪ್ರಯಾಣಿಕನಿಂದ ೩೪.೭೫ ಲಕ್ಷ ರೂ. ಮೌಲ್ಯದ ೧೦೫೨.೯೦ ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ದುಬೈಯಿಂದ ಸ್ಪೈಸ್ ಜೆಟ್ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನೊಬ್ಬನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಆತನ ಬ್ಯಾಗ್‌ನಲ್ಲಿದ್ದ ಮಿಕ್ಸಿಯ ಮೋಟಾರ್‌ನಲ್ಲಿ ಚಿನ್ನವನ್ನು ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ. ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

 

Leave a Comment