ಮಿನಿ ಬಸ್ ಹರಿದು ವ್ಯಕ್ತಿ ಸಾವು

ಬೆಂಗಳೂರು, ಸೆ. ೩- ಮಿನಿ ಬಸ್ ಹರಿದು ಚಿಂದಿ ಆಯುವ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ತಿಲಕ್ ನಗರದ ಈಸ್ಟ್ ಎಂಡ್ ರಸ್ತೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ಚಿಂದಿ ಆಯುತ್ತಿದ್ದ ರವಿ (38) ಮೃತಪಟ್ಟವರು. ರಾತ್ರಿ 2.45ರ ವೇಳೆ ಈಸ್ಟ್ ಎಂಡ್ ರಸ್ತೆಯ ಡಿ ಬ್ಲಾಕ್‌ನಲ್ಲಿ ರವಿ ರಸ್ತೆಯ ಪಕ್ಕದಲ್ಲಿ ಮಲಗಿದ್ದಾಗ ಮಿನಿ ಬಸ್ ಹರಿದು ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿರುವ ಮೈಕೋ ಲೇಔಟ್ ಸಂಚಾರ ಪೊಲೀಸರು, ಮಿನಿ ಬಸ್ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಯುವತಿ ನೇಣು
ಯಲಹಂಕದ ಕೋಗಿಲು ಮುಖ್ಯರಸ್ತೆಯಲ್ಲಿ ವಾಸಿಸುತ್ತಿದ್ದ ವೇದಾವತಿ (28) ಎಂಬುವವರು ಜೀವನದಲ್ಲಿ ಜುಗುಪ್ಸೆ ಹೊಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
10 ವರ್ಷಗಳ ಹಿಂದೆ ನವೀನ್ ಕುಮಾರ್ ಎಂಬುವವರನ್ನು ವಿವಾಹವಾಗಿದ್ದ ವೇದಾವತಿ ಅವರು ರಾತ್ರಿ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಯಲಹಂಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪೀಠೋಪಕರಣ ಭಸ್ಮ
ವಿಜಯನಗರದ ಪಟ್ಟೆಗಾರ್ ಪಾಳ್ಯದ ಅರ್ಪಿತಾ ಮೋಟಾಱ್ಸ್‌ಗೆ ನಿನ್ನೆ ರಾತ್ರಿ ಆಕಸ್ಮಿಕ ಬೆಂಕಿ ತಗುಲಿ ಪೀಠೋಪಕರಣಗಳು, ದಾಖಲಾತಿಗಳು ಸುಟ್ಟುಹೋಗಿವೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ತಗುಲಿದ ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿ ದಾವಿಸಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಜಯನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಜೂಜಾಟ
ನಾಗರಬಾವಿಯ ವಿನಾಯಕ ಲೇಔಟ್‌ನ ಮನೆಯೊಂದರಲ್ಲಿ ಅಂದರ್ ಬಾಹರ್ ಜೂಜಾಟವಾಡುತ್ತಿದ್ದ ಆರು ಮಂದಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು 1.26 ಲಕ್ಷ ರೂ. ನಗದನ್ನು ವಶಪಡಿಸಿಕೊಂಡು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Leave a Comment