ಮಿನಿ ಮಹಾಸಮರ ಸೋನಿಯಾಗೆ ಅಗ್ನಿಪರೀಕ್ಷೆ

ನವದೆಹಲಿ, ಸೆ ೨೨-ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಕಾಂಗ್ರೆಸ್ ಪಕ್ಕಕ್ಕೆ ಮತ್ತೊಮ್ಮೆ ಅಗ್ನಿ ಪರೀಕ್ಷೆ ಎದುರಾಗಿದೆ. ನಿನ್ನೆಯಷ್ಟೇ ಕೇಂದ್ರ ಚುನಾವಣಾ ಆಯೋಗ ಮಹಾರಾಷ್ಟ್ರ, ಹರಿಯಾಣ ವಿಧಾನಸಭೆಗೆ ಹಾಗೂ ಕರ್ನಾಟಕದ ೧೫ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಪ್ರಕಟಿಸಿದ್ದು ಕಾಂಗ್ರೆಸ್ ತನ್ನ ವರ್ಚಸ್ಸನ್ನು ಹೆಚ್ಚಿಸಿಕೊಳ್ಳಲು ಹೆಣಗಾಡುತ್ತಿದೆ. ಇದರ ಬೆನ್ನಲ್ಲೇ ಚುನಾವಣೇ ಪ್ರಕಟವಾಗಿರುವುದು ಆ ಪಕ್ಷಕ್ಕೆ ಮಾಡು ಇಲ್ಲವೆ ಮಡಿ ಎಂಬತಾಗಿದೆ.

ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷ ಪರಾಭವಗೊಂಡಿರುವುದು ಪಕ್ಷದ ಕಾರ್ಯಕರ್ತರನ್ನು ಹತಾಶರನ್ನಾಗಿ ಮಾಡಿದೆ. ಈಗ ಪಕ್ಷದ ಕಾಂiiಕರ್ತರಿಗೆ ಆತ್ಮಸ್ಥೈಂii ತುಂಬಿ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕಾಗಿದೆ. ಹೀಗಾಗಿ ಈ ಚುನಾವಣೆಗಳು ಮಧ್ಯಂತರ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿಯವರಿಗೆ ಅಗ್ನಿಪರೀಕ್ಷೆಯಾಗಿ ಪರಿಣಮಿಸಿದೆ.

ಸಾರ್ವತ್ರಿಕ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದೆ. ಇದು ಕೂಡ ಕಾಂಗ್ರೆಸ್ ಪಕ್ಷವನ್ನು ಪೇಚಿಗೆ ಸಿಲುಕಿಸಿದೆ. ಮೋದಿಯವರ ಗೆಲುವಿನ ನಾಗಲೋಟಕ್ಕೆ ಬ್ರೇಕ್ ಹಾಕುವುದು ಹೇಗೆ ಎಂಬ ಬಗ್ಗೆ ಪಕ್ಷದ ನಾಯಕರನ್ನು ಚಿಂತೆ ಗೀಡು ಮಾಡಿದೆ.

ಅದರಲ್ಲೂ ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳಿಗೆ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಬಗ್ಗೆ ಮತದಾರರಿಗೆ ಒಲವಿಲ್ಲ. ಲೋಕಸಭಾ ಚುನಾವಣೆಗೆ ಮುನ್ನ ನಾಯಕತ್ವದಲ್ಲಿರುವ ಕೊರತೆ ಉಲ್ಬಣಗೊಂಡಿರುವುದೇ ಇದಕ್ಕೆ ಕಾರಣವಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಅನುಭವಿಸಿದ ಸೋಲಿನ ನೈತಿಕ ಹೊಣೆ ಹೂತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರಿಂದ ಅಚ್ಚರಿಯ ಬೆಳವಣಿಯಲ್ಲಿ ಸೋನಿಯಾ ಗಾಂಧಿ ಮತ್ತೆ ಪಕ್ಷದ ನಾಯಕತ್ವದ ಹೊಣೆ ಹೊತ್ತ ನಂತರ ಹರಿಯಾಣ ಕಾಂಗ್ರೆಸ್ ಘಟಕವನ್ನು ಪುನರ್ ರಚನೆ ಮಾಡಿದ್ದಾರೆ. ಮಹಾರಾಷ್ಟ್ರ ಕಾಂಗ್ರೆಸ್ ಘಟಕ್ಕೆ ಕಾಯಕಲ್ಪ ಮಾಡಿದ್ದಾರೆ. ಆದರೂ ಚುನಾವಣೆಂiiಲ್ಲಿ ಪಕ್ಷವನ್ನು ಗೆಲ್ಲಿಸಿಕೊಂಡು ಬರುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ.

ರಾಷ್ಟ್ರವಾದ ಮತ್ತು ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಪಡಿಸುವ ಮೂಲಕ ನರೇಂದ್ರ ಮೋದಿ ಪಾರುಪತ್ಯ ಮೆರೆದಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ನಾಯಕರು ಭ್ರಷ್ಟಚಾರ ಆರೋಪಕ್ಕೆ ಗುರಿಯಾಗಿರುವುದು ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಅದರೆ ದೇಶದಲ್ಲಿ ಆರ್ಥಿಕ ಹಿಂಜರಿಕೆ ವಿಷಯವನ್ನು ಪ್ರಮುಖವಾಗಿಟ್ಟುಕೊಂಡು ಬಿಜೆಪಿ ವಿರುದ್ಧ ಹೋರಾಟ ನಡೆಸಲು ಕಾಂಗ್ರೆಸ್ ಕಾರ್ಯತಂತ್ರ ರೂಪಿಸಲು ಮುಂದಾಗಿದೆ.

ಆರ್ಥಿಕ ಹಿಂಜರಿತದಿಂದಾಗಿ ಯುವಕರು ನಿರುದ್ಯೋಗಿಗಳಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಚುನಾವನೆ ಎದುರಿಸಲು ಕಾಂಗ್ರೆಸ್ ಸಜ್ಜಾಗಿದೆ.

Leave a Comment