ಮೀನುಗಾರರು ನಾಪತ್ತೆ? ಮೋದಿಗೆ ಪೇಜಾವರಶ್ರೀ ಪತ್ರ

ಉಡುಪಿ, ಜ.೧೧- ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ಕಳೆದ ೨೬ ದಿನಗಳಿಂದ ನಾಪತ್ತೆಯಾಗಿರುವ ಏಳು ಮಂದಿ ಮೀನುಗಾರರ ಪತ್ತೆಗೆ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರು ಪ್ರಧಾನಿ, ಕೇಂದ್ರ ಗೃಹ ಸಚಿವರು ಹಾಗೂ ರಕ್ಷಣಾ ಸಚಿವರಿಗೆ ಪತ್ರ ಬರೆದಿದ್ದಾರೆ.
ನಾಪತ್ತೆಯಾದ ಏಳು ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ಮರಳಿ ಕರೆತರುವಲ್ಲಿ ಕೇಂದ್ರ ಸರಕಾರ ಉನ್ನತ ಮಟ್ಟದ ತನಿಖೆ ಕೈಗೊಂಡು, ಶೀಘ್ರವೇ ಪತ್ತೆ ಮಾಡಬೇಕೆಂದು ಪೇಜಾವರ ಶ್ರೀಗಳು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ರಾಜನಾಥ ಸಿಂಗ್ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ರಿಗೆ ಇ-ಮೈಲ್ ಮೂಲಕ ಕಳುಹಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Leave a Comment