ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಧರಣಿ 26 ಕ್ಕೆ

ಕಲಬುರಗಿ ಸೆ 22:  ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಶೇ 25 ರಷ್ಟು ಮೀಸಲಾತಿ ಹೆಚ್ಳಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾಘಟಕದ ವತಿಯಿಂದ ಸೆ 26 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುವದಾಗಿ ಸಮಿತಿ ಜಿಲ್ಲಾ ಸಂಚಾಲಕ ಮಹಾದೇವ ಕೋಳಕೂರ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.       ಪರಿಶಿಷ್ಟ ಜಾತಿಗೆ ಶೇ 18 ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ 7 ರಷ್ಟು ಮೀಸಲಾತಿ ಪ್ರಮಾಣ ಹೆಚ್ಚಿಸಿಬೇಕು.  ಭೂ ಒಡೆತನ ಯೋಜನೆಯಲ್ಲಿ ಅರ್ಹ ಫಲಾನುಭವಿಗಳಿಗೆ ಭೂಮಿ ಮಂಜೂರು ಮಾಡಬೇಕು.ಬೆಲೆ ಏರಿಕೆಗೆ ತಕ್ಕಂತೆ ವಿದ್ಯಾರ್ಥಿ ವೇತನ ,ಮತ್ತು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೇಲ್ ಗಳ ಸಂಖ್ಯೆ ಹೆಚಿಸುವದು ಸೇರಿದಂತೆ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಧರಣಿ ನಡೆಸಲಾಗುವದು ಎಂದರು. ಸುದ್ದಿಗೋಷ್ಠಿಯಲ್ಲಿ ಭೀಮಶ್ಯಾ ಖನ್ನಾ, ಶ್ರೀಮಂತ ಸೂಲೇಕರ್, ದವಲಪ್ಪ ಮದನ್,ಶಿವಕುಮಾರ ಅಜಾದಪುರ ಸೇರಿದಂತೆ ಹಲವರಿದ್ದರು..

Leave a Comment