ಮುಂದಿನ ದಿನಗಳಲ್ಲಿ ತಾಲೂಕು ಜಿಲ್ಲಾ ಮಟ್ಟದಲ್ಲಿ ಸವಿತಾ ಸಮಾಜದ ವಿಚಾರ ಸಂಕಿರಣ

ಬಳ್ಳಾರಿ, ಜೂ.17: ಕರ್ನಾಟಕ ರಾಜ್ಯ ಸವಿತಾ ಸಮಾಜ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಸಮಾಜದ ವತಿಯಿಂದ ನಗರದ ಖಾಸಗಿ ಹೋಟೆಲ್‍ನಲ್ಲಿ ವಿಚಾರ ಸಂಕಿರಣ ನಡೆಯಿತು.

ಸವಿತಾ ಸಮಾಜ ರಾಜ್ಯಾದ್ಯಂತ ಇದೆ. ಆದರೆ ಮುಂಬೈ ಕರ್ನಾಟಕ, ಮಧ್ಯ ಕರ್ನಾಟಕ, ಹೈದರಾಬಾದ್ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಸವಿತಾ ಪೀಠದ ಶ್ರೀ ಶ್ರೀಧರಾನಂದ ಸರಸ್ವತಿ ಸ್ವಾಮೀಜಿ, ದೇವರಾಜ ಅರಸು ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಅಶೋಕ ಗಸ್ತಿ, ಸಮಾಜ ಮುಖಂಡರಾದ ಲಿಂಗಸೂರಿನ ನಾಗರಾಜ್ ಗಸ್ತಿ, ವೆಂಕಟರಾವ್, ಕೊಪ್ಪಳ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಗುಲ್ಬರ್ಗ ಜಿಲ್ಲಾಧ್ಯಕ್ಷ ನರಸಿಂಗ್, ವಿಜಯಪುರ ಜಿಲ್ಲಾ ಪ್ರತಿನಿಧಿ ರಾಘವೇಂದ್ರ ಗುರ್ಜಾಲ, ರಾಯಚೂರು ಜಿಲ್ಲಾ ಪ್ರತಿನಿಧಿ ರಾಘವೇಂದ್ರ ಇಟಗಿ ಹಾಗೂ ರಾಜ್ಯ ಉಪಾಧ್ಯಕ್ಷ ರೂಪೇಶ್ ಕುಮಾರ್, ಜಿಲ್ಲಾ ಪ್ರತಿನಿಧಿ ಶ್ರೀನಿವಾಸ್, ವಿಭಾಗೀಯ ಕಾರ್ಯದರ್ಶಿ ವೆಂಕಟೇಶ್ ವಲ್ಲೂರು, ಧಾರವಾಡ ಜಿಲ್ಲೆಯ ಧನರಾಜ್, ಬಾಲರಾಜ್, ಚಿತ್ರದುರ್ಗ ತಿಪ್ಪೇಸ್ವಾಮಿ, ಬಳ್ಳಾರಿ ಜಿಲ್ಲಾಧ್ಯಕ್ಷ ಶರಣಪ್ಪ ಅವರು ಮಾತನಾಡಿ, ಸವಿತಾ ಸಮಾಜದ ಬಂಧುಗಳು ಒಗ್ಗಟ್ಟಾಗಿ ತಮ್ಮ ಶಕ್ತಿ ಪ್ರದರ್ಶನವನ್ನು ಮಾಡಬೇಕು. ಮುಂಬರುವ ದಿನಗಳಲ್ಲೂ ಎಲ್ಲರೂ ಒಗ್ಗಟ್ಟಾಗಿದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದೆಂದು ಸಲಹೆ ನೀಡಿದರು.

ಮುಂಬರುವ ದಿನಗಳಲ್ಲಿ ಈ ವಿಚಾರವಾಗಿ ದೊಡ್ಡ ಮಟ್ಟದಲ್ಲಿ ವಿಚಾರ ಸಂಕಿರಣಗಳನ್ನು ಆಯಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಹಮ್ಮಿಕೊಳ್ಳಬೇಕು ಎಂದು ತೀರ್ಮಾನಿಸಲಾಯಿತು.

Leave a Comment