ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ: ಸಿದ್ದು

ಬೆಂಗಳೂರು, ಡಿ. ೬- ಮುಖ್ಯಮಂತ್ರಿ ಹುದ್ದೆಯೇ ಖಾಲಿ ಇಲ್ಲ, ಹೀಗಿರುವಾಗ ಮತ್ತೆ ಮುಖ್ಯಮಂತ್ರಿಯಾಗುವ ಅವಕಾಶ ಎಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್‌ ಶಾಸಕ ಗಣೇಶ್ ಸೇರಿದಂತೆ ಹಲವು ಶಾಸಕರು ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಬಯಸಿರುವ ಬಗ್ಗೆ ವಿಧಾನಸೌಧದಲ್ಲಿಂದು ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದಷ್ಟೆ ಹೇಳಿದರು.
ಈ ತಿಂಗಳ 22 ರಂದು ಸಚಿವ ಸಂಪುಟ ವಿಸ್ತರಣೆ ನಿಶ್ಚಿತ. ಸಂಪುಟ ವಿಸ್ತರಣೆ ಮತ್ತೆ ಮುಂದಕ್ಕೆ ಹೋಗುವುದಿಲ್ಲ. ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿಯವರೊಂದಿಗೆ ಚರ್ಚಿಸಿ 22ರಂದೇ ಸಚಿವರಾಗುವವರ ಹೆಸರನ್ನು ಘೋಷಿಸಲಾಗುವುದು ಎಂದು ಅವರು ಹೇಳಿದರು.

Leave a Comment