ಮೂಲಭೂತ ಸೌಕರ್ಯಕ್ಕೆ ಎಂಆರ್‌ಹೆಚ್ಎಸ್ ಪ್ರತಿಭಟನೆ

ದೇವದುರ್ಗ.ಡಿ.07- ತಾಲೂಕಿಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಎಂಆರ್‌ಹೆಚ್ಎಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ಸಂಬಂಧ ಜಿ.ಪಂ.ಸಿಇಓಗೆ ಮನವಿ ಸಲ್ಲಿಸಿ, ತಾಲೂಕಿಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿರುವ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ವಾರದೊಳಗೆ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಇದುವರೆಗೂ ಯಾವುದೇ ಸೌಕರ್ಯ ಕಲ್ಪಿಸಿಲ್ಲವೆಂದು ಆರೋಪಿಸಿದ್ದಾರೆ. ತಾಲೂಕಿನ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ಗಮನ ಸೆಳೆಯುವ ಪ್ರಯತ್ನ ಮಾಡಿದರೆ ಹಾರಿಕೆ ಉತ್ತರ ನೀಡಿ ನುಣಿಚಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಕೂಡಲೇ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಂಆರ್‌ಹೆಚ್ಎಸ್ ತಾಲೂಕಾಧ್ಯಕ್ಷ ಬೂದೆಪ್ಪ ಕ್ಯಾದಿಗಿ, ರಮೇಶ, ಶಿವರಾಜ, ಪ್ರಭು ಕಾಕರಗಲ್, ನರಸಪ್ಪ ಜರದಬಂಡಿ, ಪ್ಯಾಟಪ್ಪ, ರಂಗಪ್ಪ ಇತರರು ಉಪಸ್ಥಿತರಿದ್ದರು.

Leave a Comment