ಮೂವರು ಅಂತರ್ ರಾಜ್ಯ ಕಳ್ಳರ ಬಂಧನ

ಹುಬ್ಬಳ್ಳಿ, ಜು 11- ಮೂವರು ಕುಖ್ಯಾತ ಅಂತರ್ ರಾಜ್ಯ ಕಳ್ಳರನ್ನು ಶಹರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ತಿರುಚನಾಪಳ್ಳಿ ನಿವಾಸಿಗಳಾದ ಸತ್ಯಮೂರ್ತಿ, ಕುಮಾರೇಶ ಹಾಗೂ ಭಾರತಿ ರಾಜ್ ಎಂಬುವರೇ ಬಂಧಿತ ಕಳ್ಳರು.
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಈ ಕಳ್ಳರನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಾರುಗಳನ್ನೇ ಟಾರ್ಗೆಟ್ ಮಾಡಿಕೊಂಡು ಈ ಮೂವರು ಕಾರಿನಲ್ಲಿದ್ದ ವಸ್ತುಗಳನ್ನು ಕದಿಯುತ್ತಿದ್ದರೆನ್ನಲಾಗಿದೆ.
ನಗರದಲ್ಲಿಯೇ ಠಿಕಾಣಿ ಹೂಡಿದ್ದ ಈ ಕಳ್ಳರು ಸಾರ್ವಜನಿಕರ ಗಮನ ಬೇರೆಡೆ ಸೆಳೆದು ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ಕಾರುಗಳ ಗ್ಲಾಸ್ ಒಡೆದು ಅದರಲ್ಲಿದ್ದ ವಸ್ತುಗಳನ್ನು ಕದಿಯುತ್ತಿದ್ದರೆನ್ನಲಾಗಿದೆ.
ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕಳ್ಳತನದಲ್ಲಿ ತೊಡಗಿದ್ದ ಈ ಖದೀಮರನ್ನು ಹು.ಧಾ. ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ್, ಡಿಸಿಪಿ ಬಿ.ಎಸ್. ನೇಮಗೌಡ ಅವರ ಮಾರ್ಗದರ್ಶನದಲ್ಲಿ ಶಹರ ಠಾಣೆಯ ಸಿಪಿಐಗಳಾದ ಭರತ್ ರೆ‌‌ಡ್ಡಿ,  ಗಿರೀಶ

Leave a Comment