ಮೆಡಿಕಲ್ ಕಾಲೇಜ್ ಗಾಗಿ ಡಿಕೆಶಿ ಜೊತೆ ಸಂಘರ್ಷವಿಲ್ಲ

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತು ಕೊಡಲ್ಲ, ಕೊಟ್ಟರೆ ತಪ್ಪುವುದಿಲ್ಲ ಎಂದು ಅನರ್ಹ ಶಾಸಕ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಮೆಡಿಕಲ್ ಕಾಲೇಜ್ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರದಿಂದಲೇ ಯಡಿಯೂರಪ್ಪನವರ ಬಲಪಡಿಸುತ್ತವೆ ಎಂದು ಹೇಳಿದ್ದಾರೆ.
ಮೆಡಿಕಲ್ ಕಾಲೇಜುಗಾಗಿ ಡಿ.ಕೆ. ಶಿವಕುಮಾರ್ ಜೊತೆಗೆ ಸಂಘರ್ಷ ಮಾಡುವುದಿಲ್ಲ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವೈದ್ಯಕೀಯ ಸೌಲಭ್ಯಗಳು ಇಲ್ಲ. ಬೆಂಗಳೂರಿಗೆ ಪರ್ಯಾಯವಾಗಿ ಚಿಕ್ಕಬಳ್ಳಾಪುರ ಬೆಳೆಯಬೇಕು. ಈ ಭಾಗದ ಜನರಿಗೆ ಅನುಕೂಲ ಕಲ್ಪಿಸಿಕೊಡಲು ಮೆಡಿಕಲ್ ಕಾಲೇಜ್ ಸ್ಥಾಪಿಸಲಾಗುತ್ತಿದೆ. ಮೆಡಿಕಲ್ ಕಾಲೇಜುಗಾಗಿ ಡಿ.ಕೆ. ಶಿವಕುಮಾರ್ ಜೊತೆಗೆ ಸಂಘರ್ಷ ಮಾಡಿಲ್ಲ ಎಂದು ಹೇಳಿದ್ದಾರೆ.

Leave a Comment