ಮೆಥೋಡಿಸ್ಟ್: ಗುರುವಂದನಾ ಕಾರ್ಯಕ್ರಮ

ರಾಯಚೂರು.ಫೆ.19- ನಗದ ಮೆಥೋಡಿಸ್ಟ್ ಶಾಲೆಯಲ್ಲಿ 2005-06 ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಹಳೆ ವಿದ್ಯಾರ್ಥಿಗಳ ಪುನರ್ ಮಿಲನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಮೆಥೋಡಿಸ್ಟ್ ಚರ್ಚ್‌ನ ಜಿಲ್ಲಾ ಮೇಲ್ವಿಚಾರಕರು ಘನ ರೇ, ಆನಂದ ಹೊಸೂರು ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಕರ ಮಾರ್ಗದರ್ಶನ ಅಗತ್ಯವಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಕಂಡಾಗ ಇಂತಹ ಗುರುವಂದನಾ ಕಾರ್ಯಕ್ರಮ ಮಾಡಲು ಸಾಧ್ಯ ಎಂದು ಹೇಳಿದರು. ಹಾಗೂ ವಿದ್ಯಾರ್ಥಿಗಳ ಸಾಧನೆಯ ಹಿಂದೆ ಶಿಕ್ಷಕರ ಸೇವೆ ಬಹುಮುಖ್ಯ ಎಂದರು. ಶಾಲಾ ಎಲ್ಲಾ ಶಿಕ್ಷಕರುಗಳಿಗೆ ಸನ್ಮಾನ ಕಾರ್ಯಕ್ರಮ ಮಾಡಲಾಯಿತು.
ಎಲ್ಲಾ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Leave a Comment