ಮೈತ್ರಿಗೆ ಈಗಲೂ ಬಾಗಿಲು ತೆರೆದಿದೆ

ನವದೆಹಲಿ.ಏ.15.ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್‌ ಮತ್ತು ಆಮ್‌ಆದ್ಮಿ ಮೈತ್ರಿ ಕುರಿತಾಗಿನ ಆಮ್‌ಆದ್ಮಿ ಪಕ್ಷದ ಮುಖಂಡ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಮೈತ್ರಿಗೆ ಈಗಲೂ ಬಾಗಿಲು ತೆರೆದಿದೆ.ಆದರೆ,  ಸಮಯ ಓಡುತ್ತಿದೆ ಎಂದಿದ್ದಾರೆ

ಈ ಬಗ್ಗೆ ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ, ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಆಪ್‌ ನಡುವಿನ ಮೈತ್ರಿಯಿಂದ ಬಿಜೆಪಿ ಸೋಲಿಸಲು ಸಾಧ್ಯವಿದೆ. ಕಾಂಗ್ರೆಸ್‌ ದೆಹಲಿಯಲ್ಲಿ ಆಪ್‌ಗೆ 4 ಸ್ಥಾನಗಳನ್ನು ಬಿಟ್ಟುಕೊಡಲು ಸಿದ್ಧವಿದೆ. ಆದರೆ ಕೇಜ್ರಿವಾಲ್‌ ಮತ್ತೊಂದು ಯೂಟರ್ನ್‌ ತೆಗೆದುಕೊಂಡಿದ್ದಾರೆ. ನಮ್ಮ ಬಾಗಿಲು ತೆರೆದಿದೆ. ಆದರೆ ಸಮಯ ಓಡುತ್ತಿದೆ ಎಂದಿದ್ದಾರೆ.

ಕಾಂಗ್ರೆಸ್‌ನೊಂದಿಗಿನ ಮೈತ್ರಿ ಸಾಧ್ಯತೆಯ ಸುಳಿವು ನೀಡಿದ್ದ ಕೇಜ್ರಿವಾಲ್‌, ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ದೆಹಲಿಯಲ್ಲಿ ಆಪ್‌ ಏನ್ನನ್ನು ಬೇಕಾದರೂ ಮಾಡಲು ಸಿದ್ಧವಿದೆ ಎಂದು ಭಾನುವಾರ ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದರು.

Leave a Comment