ಮೊಬೈಲ್ ಸಹವಾಸದಿಂದ ದೂರವಿರಿ. ಬಿ.ಪಿ. ದೇವ ಮಾನೆ ಕಿವಿ ಮಾತು

ಮೈಸೂರು. ಜು. 12. ದೇಶದಲ್ಲಿ ಜಾರಿಯಲ್ಲಿರುವ ಕಾನೂನುಗಳನ್ನು ಕಡ್ಡಾಯವಾಗಿ ಪಾಲಿಸುವುದು ಪ್ರಜೆಗಳ ಆದ್ಯ ಕರ್ತವ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಪಿ. ದೇವಮಾನೆ ಹೇಳಿದರು.
ಅವರು ಇಂದು ಬೆಳಿಗ್ಗೆ ನಗರದ ಕೆ.ಜಿ. ಕೊಪ್ಪಲಿನಲ್ಲಿರುವ ನೇಗಿಲಯೋಗಿ ಮರುಳೇಶ್ವರ ಸೇವಾ ಭವನದಲ್ಲಿ ಬಿ.ಜಿ.ಎಸ್. ಒಕ್ಕಲಿಗರ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ, ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಮೈಸೂರು ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಾನೂನು ಅರಿವು ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಧಾಟಿಸಿ ಮಾತನಾಡುತ್ತಿದ್ದರು. ನಮ್ಮ ಸಂವಿಧಾನದಲ್ಲಿ ಉಲ್ಲೇಖಿಸಿರುವಂತೆ ದೇಶದ ಪ್ರಜೆಗಳ ರಕ್ಷಣೆಗಾಗಿ ಕಾನೂನುಗಳನ್ನು ರೂಪಿಸಲಾಗಿದೆ. ಇವುಗಳನ್ನು ಕಡ್ಡಾಯವಾಗಿ ಪಾಲಿಸುವುದು ಪ್ರತಿಯೊಬ್ಬ ಪ್ರಜೆಗಳ ರಕ್ಷಣೆಗಾಗಿ ಕಾನೂನುಗಳನ್ನು ರೂಪಿಸಲಾಗಿದೆ. ಇವುಗಳನ್ನು ಕಡ್ಡಾಯವಾಗಿ ಪಾಲಿಸುವುದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ. ಇವುಗಳ ಪಾಲನೆಯಿಂದ ದೇಶದಲ್ಲಿ ಶಾಂತಿ, ನೆಮ್ಮದಿ, ಇತ್ಯಾದಿಗಳನ್ನು ಕಾಣಬಹುದಾಗಿದೆ ಎಂದು ದೇವಮಾನೆ ತಿಳಿಸಿದರು.
ಇದೇ ಸಂಧರ್ಭದಲ್ಲಿ ಪ್ರತಿಭಾ ಒಕ್ಕಲಿಗ ಜನಾಂಗದ ವಿದ್ಯಾರ್ಧಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಮಾಡಿದ ದೇವಮಾನೆಯವರು ವಿದ್ಯಾರ್ಧಿಗಳು ತಮ್ಮ ಭವಿಷ್ಯವನ್ನು ಉಜ್ಜಲಗೊಳಿಸಿ ಕೊಳ್ಳಲು ಹೆಚ್ಚಿನ ಆಸಕ್ತಿ ವಹಿಸಿ ವಿದ್ಯಾರ್ಜನೆ ಮಾಡುವುದು ಬಹಳ ಮುಖ್ಯ. ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರು ಹಾಗೂ ಉಪನ್ಯಾಸಕರುಗಳು ನೀಡುವ ಉಪನ್ಯಾಸ ಗಳನ್ನು ಆಲಿಸಿ ಅದೇ ದಿನ ರಾತ್ರಿ ಅಧ್ಯಯನ ಮಾಡಿದಲ್ಲಿ ಹೆಚ್ಚಿನ ಯಶಸು ಕಾಣಲು ಸಾಧ್ಯ. ಎಂದರು
ಇತ್ತೀಚೆಗೆ ಸಮಾಜವು ಮಾರುಕಟ್ಟೆಯಲ್ಲಿ ತನ್ನ ಕಬಂದ ಬಾಹುಗಳನ್ನು ಚಾಚಿರುವ ಮೊಬೈಲ್ ನಿಂದಾಗಿ ಭೀಕರ ದುಷ್ಪರಿಣಾಮಗಳನ್ನು ಎದುರಿಸುತ್ತಿದೆ. ಹಾಗಾಗಿ ಇಂತಹ ಮೊಬೈಲ್‍ಗಳ ಸಹವಾಸದಿಂದ ದೂರ ಇರುವಂತೆ ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ದೇವಮಾನೆಯವರು ನಿಮ್ಮ ಭವಿಷ್ಯ ಉಜ್ಜಲವಾಗಿರಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆಯ ನಿವೃತ್ತ ನಿರ್ದೇಶಕ ಡಾ|| ಕೆ.ರಾಮಕೃಷ್ಣಪ್ಪ ಬಿ.ಜಿ.ಎಸ್. ಒಕ್ಕಲಿಗರ ಹಿರಿಯ ನಾಗರಿಕರ ಸಂಘದ ಪದಾಧಿಕಾರಿಗಳಯ ಉಪಸ್ಧಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪಿ.ಎಂ.ರಾಮು ವಹಿಸಿದ್ದರು

Leave a Comment