ಮೋದಿ ಪ್ರಧಾನಿಯಾಗಲು ಮಹಾರುದ್ರ ಯಾಗ

ಮಂಗಳೂರು, ಡಿ.೬- ನರೇಂದ್ರ ಮೋದಿ ಅವರಿಗೆ ಮತ್ತೊಮ್ಮೆ ಪ್ರಧಾನಿಯಾಗುವ ಯೋಗ ಬರುವಂತೆ ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮಹಾರುದ್ರ ಯಾಗ ನಡೆಸಲಾಗಿದೆ. ಬಂಟ್ವಾಳ ತಾಲೂಕಿನ ಕಕ್ಕೆಪದವು ಎಂಬಲ್ಲಿ ಯಾಗ ನಡೆದಿದ್ದು, ಸ್ಥಳೀಯ ಸಂಘಟನೆ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ಯಾಗ ಆಯೋಜನೆ ಮಾಡಲಾಗಿತ್ತು. ಕಾರಿಂಜ ಕೊಡಂಬೆಟ್ಟು ರಾಘವೇಂದ್ರ ಭಟ್ ಪೌರೋಹಿತ್ಯದಲ್ಲಿ ಈ ಯಾಗ ಮಾಡಲಾಗಿದೆ. ಬೆಳಗ್ಗೆ ೭ರಿಂದ ಆರಂಭವಾದ ರುದ್ರಯಾಗ ೧೧.೩೦ ಕ್ಕೆ ಪೂರ್ಣಾಹುತಿಯಾಗಿದೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದ್ದು, ಸಂಸದ ನಳಿನ್ ಕುಮಾರ್ ಯಾಗದ ಪೂರ್ಣಾಹುತಿ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರು, ಶ್ರೀರಾಮಾಂಜನೇಯ ಗೆಳೆಯರ ಬಳಗದ ಸದಸ್ಯರು ಉಪಸ್ಥಿತರಿದ್ದರು.

Leave a Comment