ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿಯಾಗಿ ಸಂತೋಷ್ ನೇಮಕ

ಬೆಂಗಳೂರು, ಮೇ 30-ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಜಕೀಯ ಕಾರ್ಯದರ್ಶಿಯಾಗಿ ಎನ್.ಆರ್. ಸಂತೋಷ್ ನೇಮಕವಾಗಿದ್ದಾರೆ.
ಈಗಾಗಲೇ ಮೂವರು ಮುಖ್ಯಂಮತ್ರಿ ಅವರಿಗೆ ರಾಜಕೀಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು. ಅವರೊಂದಿಗೆ ಇದೀಗ ಯಡಿಯೂರಪ್ಪ ಅವರಿಗೆ 4ನೇ ರಾಜಕೀಯ ಕಾರ್ಯದರ್ಶಿಯಾಗಿ ಎನ್.ಆರ್. ಸಂತೋಷ್ ಅವರು ನೇಮಕವಾಗಿದ್ದಾರೆ.

ಈ ಕುರಿತು ಅಧಿಕೃತವಾಗಿ ಸರ್ಕಾರದ ಆದೇಶ ಹೊರಬಿದ್ದಿದೆ. ಈಗಾಗಲೇ ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ಶಾಸಕರಾದ ಎಸ್. ಆರ್. ವಿಶ್ವನಾಥ್, ಎಂ.ಪಿ. ರೇಣುಕಾಚಾರ್ಯ ಮತ್ತು ಶಂಕರ ಗೌಡ ಪಾಟೀಲ್ ಅವರು ನೇಮಕವಾಗಿದ್ದಾರೆ. ಅವರೊಂದಿಗೆ ಇದೀಗ ಎನ್. ಆರ್. ಸಂತೋಷ್ ಕೂಡ ರಾಜಕೀಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ. ಸಣ್ಣ ವಯಸ್ಸಿನಲ್ಲಿಯೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಏರಿದ ಮೊದಲ ವ್ಯಕ್ತಿ ಎಂಬ ದಾಖಲೆಗೂ ಅವರು ಪಾತ್ರರಾಗಿದ್ದಾರೆ. ಸಾಮಾನ್ಯವಾಗಿ ನಾಲ್ಕೈದ ಬಾರಿ ಶಾಸಕರಾದವರನ್ನು, ರಾಜಕೀಯ ಅನುಭವ ಹೊಂದಿದವರನ್ನು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡುವುದು ವಾಡಿಕೆಯಾಗಿತ್ತು

Share

Leave a Comment