ಯುವಕನಿಗೆ ಕೊರೊನಾ ಸೋಂಕು

 

ಕಲಬುರಗಿ,ಮೇ.23-ಕಲಬುರಗಿ ಜಿಲ್ಲೆಯಲ್ಲಿ ಮತ್ತೊಬ್ಬ ಯುವಕನಿಗೆ ಕೊರೊನಾ ಸೋಂಕು ತಗುಲಿರುವುದು ಇಂದು ದೃಢಪಟ್ಟಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 135ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಿಂದ ಆಗಮಿಸಿದ ಅಫಜಲಪುರ ತಾಲ್ಲೂಕಿನ ಮಣ್ಣೂರ ಗ್ರಾಮದ 26 ವರ್ಷದ ಯುವಕ (ರೋಗಿ ಸಂಖ್ಯೆ-1771)ನಿಗೆ ಸೋಂಕು ತಗುಲಿದೆ.

ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಒಂದೇ ಒಂದು ಸೋಂಕು ಪ್ರಕರಣ ಪತ್ತೆಯಾಗದೇ ಇರುವುದರಿಂದ ಜನ ಸ್ವಲ್ಪ ನಿರಾವಾಗಿದ್ದರು. ಇಂದು ಹೊಸದಾಗಿ ಮತ್ತೊಂದು ಸೋಂಕು ಪ್ರಕರಣ ಪತ್ತೆಯಾಗಿರುವುದು ಆತಂಕ ಮೂಡಿಸಿದೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ 135 ಜನರಿಗೆ ಸೋಂಕು ತಗುಲಿದ್ದು, ಅದರಲ್ಲಿ 7 ಜನ ಸಾವನ್ನಪ್ಪಿದ್ದು, 60 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದಂತೆ 68 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Comment