ಯುವಕನ ಮೇಲೆ ಬಡಿಗೆಗಳಿಂದ ಹಲ್ಲೆ ನಡೆಸಿದ ವಿಡಿಯೋ ವೈರಲ್

ಕಲಬುರಗಿ,ನ.9-ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬಡಿಗೆಗಳಿಂದ ಮನಬಂದಂತೆ ಥಳಿಸಿರುವ ಘಟನೆ ಜೇವರ್ಗಿ ಪಟ್ಟಣದ ಹೊರವಲಯದಲ್ಲಿ ನಡೆದಿದ್ದು, ಒಂದು ತಿಂಗಳ ಹಿಂದೆ ನಡೆದ ಈ ಹಲ್ಲೆಯ ಭಯಾನಕ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ವೈರಲ್ ಆಗಿವೆ.

ಜೇವರ್ಗಿ ತಾಲ್ಲೂಕಿನ ರೇವನೂರ ಗ್ರಾಮದ ಗುರುಪಾದ ಎಂಬ ಯುವಕನ ಮೇಲೆ ಅದೇ ಗ್ರಾಮದ ಮಹಾಂತೇಶ ಮತ್ತು ಇತರರು ಹಲ್ಲೆ ಮಾಡಿದ್ದು, ಹಲ್ಲೆ ಮಾಡುವ ದೃಶ್ಯಾವಳಿಯನ್ನು ಕಿಡಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಅಟ್ಟಹಾಸ ಮೆರೆದಿದ್ದಾರೆ.

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಹಲ್ಲೆಗೊಳಗಾದ ಗುರುಪಾದ ಈ ಬಗ್ಗೆ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಈ ದೂರಿನ ಅನ್ವಯ ಪೊಲೀಸರು ಪ್ರಮುಖ ಆರೋಪಿ ಮಹಾಂತೇಶ ಸೇರಿದಂತೆ ಐವರನ್ನು ಈಗಾಗಲೆ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

 

 

Leave a Comment