ಯುವಕ ಆತ್ಮಹತ್ಯೆ

ಮಂಗಳೂರು, ಸೆ.೧೧- ಯುವಕನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾಗಿರುವ ಘಟನೆ ಇಂದು ಬೆಳಗ್ಗೆ ನಗರದ ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಅರುಣ(೩೦) ಎಂದು ಹೆಸರಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವೆನ್ಲಾಕ್ ಶವಾಗಾರಕ್ಕೆ ಸಾಗಿಸಲಾಗಿದೆ.

Leave a Comment