ಯುವತಿ ಮೇಲೆ ಅತ್ಯಾಚಾರ : ಉಪನ್ಯಾಸಕನ ಬಂಧನ

(ನಮ್ಮ ಪ್ರತಿನಿಧಿಯಿಂದ)

ಕಲಬುರಗಿ,ಸೆ.10-ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಚೌಕ್ ಪೊಲೀಸ್  ಉಪನ್ಯಾಸಕನೊಬ್ಬನನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಕಾಲೇಜೊಂದರಲ್ಲಿ ಉಪನ್ಯಾಸಕನಾಗಿ ಸೇವೆ ಸಲ್ಲಿಸುತ್ತಿರುವ ಅಂತರೀಶ್ ರಮೇಶ್ ಕೋಟೆ (31) ಎಂಬಾತನನ್ನು ಬಂಧಿಸಿ ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ತನ್ನ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಯುವತಿ ಸೆ.1 ರಂದು ಚೌಕ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಳು. ಈ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಅಂತರೀಶ್ ನನ್ನು ಬಂಧಿಸಿ ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದು, ಸಂಜೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ ಎಂದು ತಿಳಿದುಬಂದಿದೆ. ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment