ಯುವ ವಿಜ್ಞಾನಿ ಪ್ರಶಸ್ತಿ ಮುಡಿಗೇರಿಸಿಕೊಂಡ ದುಶ್ಯಂತ್ ನಾಯಕ್

ಹನೂರು: ಆ.14- ಕೊಳ್ಳೇಗಾಲ ನಿಸರ್ಗ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ದುಶ್ಯಂತ್ ನಾಯಕ್ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಇದೇ ತಿಂಗಳ 8 ನೇ ತಾರೀಖಿನಂದು ಕೊಳ್ಳೇಗಾಲ ನಿಸರ್ಗ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಳ್ಳುವ ಮೂಲಕ ತಂದೆ ತಾಯಿ, ಗುರು ಹಿರಿಯರು, ಕಾಲೇಜು ಮತ್ತು ಜಿಲ್ಲೆಗೆ ಕೀರ್ತಿ ತರುವುದರ ಜೊತೆಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಯುವ ವಿಜ್ಞಾನಿ ಸೋಲಾರ್ ಮೂಲಕ ನೀರೆತ್ತುವ ಪ್ರಯೋಗವನ್ನು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ದುಶ್ಯಂತ್ ನಾಯಕ್‍ರವರನ್ನು ತಂದೆ ತಾಯಿ ಬಂಧು ಬಳಗ, ಶಾಲಾ ಕಾಲೇಜು ಶಿಕ್ಷಕ ವೃಂದದವರು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ತಂದೆ ಸೀಗನಾಯಕ ಹರ್ಷ: ಯುವ ವಿಜ್ಞಾನಿ ಪ್ರಶಸ್ತಿ ಪಡೆದಿರುವ ದುಶ್ಯಂತ್ ನಾಯಕ್‍ರವರ ಸಾಧನೆಗೆ ಬಿಜೆಪಿ ಮುಖಂಡರು ಹಾಗೂ ಎಲ್‍ಐಸಿ ಏಜೆಂಟ್ ಆಗಿರುವ ತಂದೆ ಸೀಗನಾಯಕ್ ಹರ್ಷ ವ್ಯಕ್ತಪಡಿಸಿದ್ದಾರೆ.

Leave a Comment