ರಕ್ಷಣಾ ಪಡೆ ಗುಂಡಿಗೆ ಮೂವರು ಹಿಬ್ಜುಲ್ ಉಗ್ರರ ಬಲಿ

ನವದೆಹಲಿ, ಅ. ೧೬- ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಹಿಬ್ಜುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಇಂದು ಬೆಳಿಗ್ಗೆ ೬ ಗಂಟೆಗೆ ಜಮ್ಮು-ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಾಜಾಲ್‌ಪುರ ಹೊರ ವಲಯದಲ್ಲಿ ಭದ್ರತಾ ಪಡೆಗಳು ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ನಡುವೆ ಗುಂಡಿನ ಕಾಳಗ ಆರಂಭಗೊಂದು ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿವೆ.
ಭದ್ರತಾ ಪಡೆಗಳು ಮತ್ತು ಕೇಂದ್ರ ಮೀಸಲು ಪಡೆಯ ಕೇಂದ್ರ ಮೀಸಲು ಪಡೆಯ ಯೋಧರು ನಡೆಸಿದ ಜಂಟಿಕಾರ್ಯಾಚರಣೆಯಲ್ಲಿ ಉಗ್ರರನ್ನು ಯಶಸ್ವಿಯಾಗಿ ಹೊಡೆದುರುಳಿಸಲಾಗಿದೆ. ಇನ್ನೂ ಮೂವರು ಉಗ್ರರು ಸ್ಥಳೀಯ ಮನೆಯೊಂದರಲ್ಲಿ ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು, ಕಾರ್ಯಾಚರಣೆಯನ್ನು ಆ ಪ್ರದೇಶದಲ್ಲಿ ಮುಂದುವರೆಸಿರುವ ಕುರಿತು ಕಾಶ್ಮೀರ ಪೊಲೀಸ್ ಅಧಿಕಾರಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

Leave a Comment