ರಜನಿ ಹೇಳಿಕೆ ಖಂಡಿಸಿ ಪ್ರತಿಭಟನೆ

ಚೆನ್ನೈ, ಜ ೨೧-ಸಮಾಜ ಸುಧಾರಕ ಪೆರಿಯಾರ್ ಇ.ವಿ.ರಾಮಸ್ವಾಮಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ ನೀಡಿರುವುದನ್ನು ಖಂಡಿಸಿ ಸೂಪರ್ ಸ್ಟಾರ್ ರಜನೀಕಾಂತ್ ನಿವಾಸದ ಮುಂದೆ ದ್ರಾವಿಡ ವಿದುತಲೈ ಕಳಗಂ ಸಂಘಟನೆಯ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು. ಆದರೆ ಕ್ಷಮೆ ಕೇಳಲು ರಜನಿಕಾಂತ್ ನಿರಾಕರಿಸಿದ್ದಾರೆ.
ಪೆರಿಯಾರ್ ಅವರ ಬಗ್ಗೆ ತಪ್ಪು ಮಾಹಿತಿಯನ್ನು ಹಬ್ಬಿಸುವ ಮೂಲಕ ಅವರ ಹೆಸರಿಗೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ ಎಂದು ದ್ರಾವಿಡ ವಿಡುತಲೈ ಕಳಗಂ ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದಾರೆ.
ಇಂದು ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿ ರಜನಿ ನಿವಾಸ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೆ ರಜನಿಕಾಂತ್ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಜನಿಕಾಂತ್, ತಾವು ನೀಡಿದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಆದರೆ ತಾವು ಯಾವುದೇ ಕಾರಣಕ್ಕೂ ಕ್ಷಮೆ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತಮಿಳು ನಿಯತಕಾಲಿಕೆಯ ೫೦ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ್ದ ರಜನಿಕಾಂತ್, ಪೆರಿಯಾರ್ ೧೯೭೧ರಲ್ಲಿ ಮೌಢ್ಯತೆಯ ನಿರ್ಮೂಲನೆ ಸಾಕಷ್ಟು ಪ್ರಯತ್ನ ನಡೆಸಿದ್ದರು. ಇದಕ್ಕಾಗಿ ನಡೆದ ಮೆರವಣಿಗೆಯಲ್ಲಿ ಶ್ರೀರಾಮ ಮತ್ತು ಸೀತೆಯ ಬೆತ್ತಲೆ ಫೋಟೊಗಳನ್ನು ಪ್ರದರ್ಶಿಸಿದ್ದರು. ಆ ಪೋಟೋಗಳಿಗೆ ಚಪ್ಪಲೊ ಹಾರ ಹಾಕಿ ಮೆರವಣಿಗೆ ನಡೆಸಿದದರು. ಆದರೆ ಯಾವುದೇ ಪತ್ರಿಕೆಗಳಲ್ಲಿ ಈ ಸುದ್ದಿ ಪ್ರಕಟವಾಗಿರಲಿಲ್ಲ ಎಂದು ವಿವಾದಾಸ್ಪದ ಹೇಳಿಕೆ ನೀಡಿದ್ದರು.

Leave a Comment