ರಸ್ತೆಗೆ ಉರುಳಿದ ಕಂಟೈನರ್ 

ವಿಟ್ಲ, ಫೆ.೪- ಕಂಟೈನರ್ ಲಾರಿಯೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಕೆಲ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ನಡೆದಿದೆ.

ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ಕಳೆದು ರಸ್ತೆ ಉರುಳಿ ಬಿದ್ದಿದೆ. ಬಳಿಕ ಪುತ್ತೂರು ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನ ದಟ್ಟನೆಯನ್ನು ನಿಯಂತ್ರಿಸಿದರು. ಕ್ರೈನ್ ಮೂಲಕ ಕಂಟೈನರ್ ಲಾರಿಯನ್ನು ಮೇಲೆತ್ತಲಾಯಿತು. ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರ  ಸ್ಥಗಿತಗೊಳಿಸಲಾಗಿತ್ತು. ಕಾರ್ಯಾಚರಣೆ ಬಳಿಕ ವಾಹನ ಸಂಚಾರಕ್ಕೆ ಅನುಮಾಡಿಕೊಡಲಾಯಿತು.

Leave a Comment