ರಸ್ತೆ ಅಪಘಾತ:ಮೂವರ ಸಾವು

ವಿಜಯಪುರ, : ವಿಜಯಪುರ ತಾಲೂಕಿನ ಯಕ್ಕುಂಡಿ ಸಮೀಪ್ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮಹಿಂದ್ರಾ ಜೀಪ್ ಮತ್ತು ಎರಡು ಬೈಕ್‍ಗಳ ನಡುವೆ ಡಿಕ್ಕಿಯಾಗಿದ್ದು, ಓವರ್‍ಟೇಕ್ ಮಾಡಲು ಹೋಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಇಂಚಗೇರಿಯ ಉಮೇಶ ಶಿವಣಗಿ(25), ಆತನ ಸಹೋದರ ಮಹೇಶ ಶಿವಣಗಿ(23), ಗೊಳಸಂಗಿಯ ಮಲ್ಲಪ್ಪ ಕುಪ್ಪಸ್ತ(20) ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಅಲ್ತಾಫ್ ಎಂಬಾತ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment