ರಸ್ತೆ ಬದಿಯ ಡಬ್ಬಿ ಅಂಗಡಿ, ಶೆಡ್ಡ ತೆರವು

ಬಾಗಲಕೋಟೆ: ಜೂ 16 : ನಗರದ ಸೌಂದರ್ಯ ಹೆಚ್ಚಿಸುವ ನಿಟ್ಟಿನಲ್ಲಿ ನಗರಸಭೆ ವತಿಯಿಂದ ನಗರದ ವಿವಿಧ ರಸ್ತೆಗಳಲ್ಲಿ ಅತೀಕ್ರಮಿಸಿರುವ ಡಬ್ಬಿ ಅಂಗಡಿ, ಶೇಡ್‍ಗಳ ತೆರವು ಕಾರ್ಯಾಚರಣೆ ನಡೆಸಲಾಗಿರುವುದಾಗಿ ನಗರಸಭೆ ಪೌರಾಯುಕ್ತ ಮುನಿಶಾಮಪ್ಪ ತಿಳಿಸಿದ್ದಾರೆ.

 

 
ನಗರದ ರಸ್ತೆದ ಅಗಲಿಕರಣಕ್ಕೆ, ಸಾರ್ವಜನಿಕರು ರಸ್ತೆಯಲ್ಲಿ ಸಂಚಾರಿಸುವಾಗ ತೊಂದರೆ ಉಂಟಾಗುತ್ತಿರುವದಕ್ಕೆ ಹಾಗೂ ಕೋವಿಡ್-19 ರ ಸೊಂಕು ನಗರದಲ್ಲಿ ಹರಡುತ್ತಿರುವ ಹಿನ್ನಲೆಯಲ್ಲಿ ಮಾರಣಾಂತಿಕ ರೋಗವನ್ನು ತಡೆಗಟ್ಟುವ ದೃಷ್ಟಿಯಿಂದ ಯಾವುದೇ ರೀತಿಯ ತೊಂದರೆಗಳು ಆಗದಂತೆ ಸಾಮಾಜಿಕ ಅಂತರವನ್ನು ಕಾಪಾಡುವ ಸಲುವಾಗಿ ಪೋಲಿಸ್ ಸಿಬ್ಬಂದಿ ಹಾಗೂ ನಗರಸಭೆಯ ಸಿಬ್ಬಂದಿಗಳೊಂದಿಗೆ ತೆರವು ಕಾರ್ಯಚರಣೆ ನಡೆಸಲಾಯಿತು.

 

 
ಮೇಲಾಧಿಕಾರಿಗಳ ನಿರ್ದೇಶನದಂತೆ ತೆರವು ಕಾರ್ಯಾವರಣೆ ಕೈಗೊಳ್ಳಲಾಗಿದ್ದು, ಇದಕ್ಕೆ ಯಾರ ಒತ್ತಡ ಇರುವುದಿಲ್ಲ. ಆದ್ದರಿಂದ ವ್ಯಾಪಾರಸ್ಥರು, ಅಂಗಡಿಕಾರರು ಹಾಗೂ ನಗರ ಸಾರ್ವಜನಿಕರು ಸಹಕರಿಸುವಂತೆ ಪೌರಾಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

Share

Leave a Comment