ರಸ್ತೆ ವಿಭಜಕಕ್ಕೆ ಬೈಕ್ ‌ಡಿಕ್ಕಿ: ಇಬ್ಬರು ಸಾವು

ತುಮಕೂರು, ಫೆ. ೧೫- ಚಲಿಸುತ್ತಿದ್ದ ದ್ವಿಚಕ್ರ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-48ರ ನೆಲಹಾಳ್ ಬಳಿ ಇಂದು ಬೆಳಿಗ್ಗೆ ನಡೆದಿದೆ.

ಮೃತಪಟ್ಟವರ ಇಬ್ಬರ ಪೈಕಿ ಓರ್ವ ಸುದೀಪ್ ಎಂದು ತಿಳಿದು ಬಂದಿದ್ದು, ಮತ್ತೋರ್ವನ ಹೆಸರು ತಿಳಿದು ಬಂದಿಲ್ಲ. ಇವರಿಬ್ಬರು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಮೂಲದವರು ಎಂದು ತಿಳಿದು ಬಂದಿದೆ.

ಇವರಿಬ್ಬರು ದ್ವಿಚಕ್ರ ವಾಹನದಲ್ಲಿ ಬೆಂಗಳೂರಿನಿಂದ ಚಿತ್ರದುರ್ಗದ ಕಡೆಗೆ ತೆರಳುತ್ತಿದ್ದರು. ಮಾರ್ಗಮಧ್ಯೆ ಕೋರಾ ಪೊಲೀಸ್ ಠಾಣೆ ಸರಹದ್ದಿನ ರಾಷ್ಟ್ರೀಯ ಹೆದ್ದಾರಿ-48ರ ನೆಲಹಾಳ್ ಬಳಿ ಬೈಕ್ ಚಾಲನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿದ್ದರಿಂದ ಇಬ್ಬರೂ ಸ್ಧಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಕೋರಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Comment