ರಾಜಕಾರಣದಲ್ಲಿ ಪ್ರಾಮಾಣಿಕ ಕೆಲಸ ಅಸಾಧ್ಯ

ದಾವಣಗೆರೆ.ಸೆ.8; ರಾಜಕಾರಣದಲ್ಲಿ ಪ್ರಾಮಾಣಿಕತೆ ಇದ್ದರೆ ಅಧಿಕಾರ ಅನುಭವಿಸುವವರು ಇಷ್ಟಪಡುವುದಿಲ್ಲ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಬೇಸರ ವ್ಯಕ್ತಪಡಿಸಿದ್ದಾರೆ.
ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಕಲಾಕುಂಚದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ಕುವರ, ಕನ್ನಡ ಕುವರಿ ಜಿಲ್ಲಾ ಪ್ರಶಸ್ತಿ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದಲ್ಲಿ ನಡೆಯುವ ಭ್ರಷ್ಟಾಚಾರ, ಮೂಲ ಸೌಲಭ್ಯಗಳ ಕೊರತೆ ಸೇರಿದಂತೆ ಇನ್ನಿತರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕೆಲಸ ಮಾಡುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ನಾನು ಮಂತ್ರಿಯಾಗಿದ್ದ ವೇಳೆ ಕ್ರಮವಹಿಸಿದ್ದೆನು ಆದರೆ ಕೆಲವರು ಮುಖ್ಯಮಂತ್ರಿ ಬಳಿ ನನ್ನ ಬಗ್ಗೆ ಇಲ್ಲಸಲ್ಲದನ್ನು ಹೇಳಿ ನನ್ನನ್ನು ಮಂತ್ರಿಗಿರಿಯಿಂದ ಕೆಳಗಿಳಿಸಿದರು ಎಂದು ವಿಷಾಧಿಸಿದರು. ನಾನು ಅಧಿಕಾರದ ಹಿಂದೆ ಬಿಳಲಿಲ್ಲ. ನನ್ನ ಇತಿಮಿತಿಯೊಳಗೆ ಸಾಮಾಜಿಕ ಕೆಲಸಗಳನ್ನು ಮಾಡಿದೆ. ನಾಲ್ಕು ವರ್ಷ ಎಂಎಲ್‍ಸಿ ಆಗಿ ಕಾರ್ಯ ನಿರ್ವಹಿಸಿದೆ. ರಾಜಕಾರಣದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಬಿಡುವುದಿಲ್ಲ. ಭ್ರಷ್ಟಾಚಾರ ತಾಂಡವಾಡುತ್ತಿದ್ದು, ದೇಶದ ಜನರು ಬಡವರಾಗುತ್ತಿದ್ದಾರೆ. ಜಾತಿ, ಮತ, ಪಂಥ ಎನ್ನದೆ, ಎಲ್ಲರನ್ನು ಸಮಾನವಾಗಿ ಕಾಣುತ್ತಾ, ಅವರನ್ನು ಪ್ರೊತ್ಸಾಹಿಸುತ್ತಿರುವುದು ಶ್ಲಾಘನೀಯ. ಆಂಗ್ಲ ವ್ಯಾಮೋಹ ಬಿಟ್ಟು ಕನ್ನಡ ಪ್ರೀತಿಸಬೇಕು. ಜಗತ್ತೇ ಒಂದು ವಿಶ್ವವಿದ್ಯಾನಿಲಯವಾಗಿದ್ದು, ಇದರಲ್ಲಿ ಕಲಿಯುವುದು ಬಹಳಷ್ಟು ಇದೆ. ಕೆಲಸವನ್ನು ಪ್ರೀತಿಸಿದಾಗ ಪ್ರಾಮಾಣಿಕತೆ ತಾನಾಗಿಯೇ ಬರುತ್ತದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲಾಕುಂಚದ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷ ಕೆ.ಹೆಚ್.ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಹೆಚ್.ಎಸ್.ಮಂಜುನಾಥ ಕುರ್ಕಿ, ತಾಲೂಕು ಅಧ್ಯಕ್ಷ ಬಿ.ವಾಮದೇವಪ್ಪ, ಮೋತಿ ಪರಮೇಶ್ವರಪ್ಪ, ಕಲಾಕುಂಚ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶಣೈ, ಪ್ರಧಾನ ಕಾರ್ಯದರ್ಶಿ ಜಿ.ಬಿ.ಲೋಕೇಶ್, ವಿಜಯಕುಮಾರ್ ಶೆಟ್ಟಿ ಸೇರಿದಂತೆ ಮೊದಲಾದವರು ಪಾಲ್ಗೊಂಡಿದ್ದರು.

Leave a Comment