ರಾಜ್ಯಕ್ಕೆ ನೀರು ಕೇಳಿದ ಮಂಡ್ಯ ಸಂಸದೆ ಸುಮಲತಾ’

ನವದೆಹಲಿ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಮೊದಲ ಬಾರಿಗೆ ಮಾತನಾಡಿದ್ದು, ನನ್ನ ಹೆಮ್ಮೆಯ ಕ್ಷೇತ್ರವಾದ ಮಂಡ್ಯದ ಸ್ವಾಭಿಮಾನಿ ಜನತೆಗೆ ಧನ್ಯವಾದಗಳು ಎಂದು ಮಂಡ್ಯ ಜನತೆಗೆ ಕನ್ನಡದಲ್ಲಿ ಶುಭಾಶಯ ಕೋರಿ ಇಂಗ್ಲಿಷ್‍ನಲ್ಲಿ ತಮ್ಮ ಮಾತನ್ನು ಆಡಿದ್ದಾರೆ.

ಇದೇ ವೇಳೆ ಅವರು ಮಾನ್ಸೂನ್ ಮಳೆ ನಿಗದಿತ ಪ್ರಮಾಣದಲ್ಲಿ ಬಂದಿಲ್ಲ. ಅಲ್ಲದೆ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕಬ್ಬು ಹಾಗೂ ಭತ್ತ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದರು. ಇದೇ ವೇಳೆ ಅವರು ಪ್ರಧಾನಿ ಮೋದಿ ಹಾಗೂ ಜಲಶಕ್ತಿ ಸಚಿವರು ಈ ಬಗ್ಗೆ ತುರ್ತು ಗಮನ ಕೊಡಬೇಕು. ಬರ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರ್ಕಾರ ಮುಂದಾಗಬೇಕಿದೆ. ಎಲ್ಲರೂ ಸೇರಿ ಸಮಸ್ಯೆ ಬಗೆಹರಿಸಬೇಕಿದೆ ಎಂದು ಸುಮಲತಾ ಮನವಿ ಮಾಡಿಕೊಂಡರು.

ಇದೇ ವೇಳೆ ಅವರು ತಮ್ಮ ಮಾತಿ ಕೊನೆಯಲ್ಲಿ ಜೈ ಜವಾನ್, ಜೈ ಕಿಸಾನ್, ಜೈ ಹಿಂದ್, ಜೈ ಕರ್ನಾಟಕ ಎಂದು ಘೋಷಣೆ ಮಾಡುವ ಮೂಲಕ ತಮ್ಮ ಮಾತನ್ನು ಮುಗಿಸಿದರು.

Leave a Comment