ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ಗೆ ಅಧಿಕಾರ

ಸದಾಶಿವ ಆಯೋಗ ವರದಿ ಅನುಷ್ಠಾನ ಸಾಧ್ಯ
ರಾಯಚೂರು.ಜ.12- ಪರಿಶಿಷ್ಟ ಜಾತಿ ವರ್ಗೀಕರಣಕ್ಕೆ ಸಂಬಂಧಿಸಿ, ದಿ.14 ರಂದು ಮುಖ್ಯಮಂತ್ರಿಗಳ ಸಮ್ಮುಖದ ಸಭೆಯಲ್ಲಿ ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಸಂಬಂಧಿಸಿ, ಒಮ್ಮತದ ನಿರ್ಧಾರ ಕೈಗೊಳ್ಳಲಾಗುತ್ತದೆಂದು ಕೇಂದ್ರ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಆಶಾ ಭಾವನೆ ವ್ಯಕ್ತಪಡಿಸಿದರು.
ಅವರಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ, 101 ಪರಿಶಿಷ್ಟ ಜಾತಿಗಳಿಗೆ ಯಾವುದೇ ಅನ್ಯಾಯವಾಗದಂತೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಸಂವಿಧಾನದ ಆಶಯದಂತೆ ಸದಾಶಿವ ಆಯೋಗ ಅನುಷ್ಠಾನಕ್ಕೆ ಸರಕಾರ ನಿರ್ಧಾರ ಕೈಗೊಳ್ಳುವಂತೆ ಎಲ್ಲಾ ದಲಿತ ಸಮುದಾಯದ ಸಂಸದರು, ಸಚಿವರು, ಶಾಸಕರು, ನಾಯಕರು, ಸಂಘ-ಸಂಸ್ಥೆಗಳು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಿವೆ.
ಈಗಾಗಲೇ ದೇಶದಲ್ಲಿ ಆಂಧ್ರ-ತೆಲಂಗಾಣದಲ್ಲಿ ಹಲವು ವರ್ಗೀಕರಣ ಕೈಗೊಳ್ಳಲಾಗಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ಇದರ ಬಗ್ಗೆ ಚರ್ಚಿಸಿದಾಗ ಸರ್ವೋಚ್ಛ ನ್ಯಾಯಾಲಯ ವರ್ಗೀಕರಣಕ್ಕೆ ಸಂಬಂಧಿಸಿ, ಲೋಕಸಭೆ ನಿರ್ಧಾರ ಕೈಗೊಳ್ಳಬೇಕು. ಸಂವಿಧಾನದ ಕಲಂ 341ಕ್ಕೆ ತಿದ್ದುಪಡಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಕಟ್ಟಕಡೆಯ ವ್ಯಕ್ತಿಯ ಸಾಮಾಜಿಕ ನ್ಯಾಯಕ್ಕಾಗಿ ವರ್ಗೀಕರಣ ಅನುಷ್ಠಾನದ ತಿದ್ದುಪಡಿ ತರುವ ಅಗತ್ಯವಿದೆ.
ಲೋಕಸಭೆ ನಾಯಕರು ಮತ್ತು ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಾನು ವೈಯಕ್ತಿಕವಾಗಿ ಭೇಟಿಯಾಗಿ ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಸಂಬಂಧಿಸಿ ನೇತೃತ್ವವಹಿಸುವಂತೆ ಕೋರಿದ್ದೇನೆ. ಸದಾಶಿವ ಆಯೋಗ ವರದಿ ಅನುಷ್ಠಾನದಿಂದ ಯಾರಿಗೂ ಅನ್ಯಾಯವಾಗುವುದಿಲ್ಲ. ಕೊರಮ, ಕೊಂಚ, ಭೋವಿ ಮತ್ತಿತರ ಸಮುದಾಯಗಳು ಈ ಬಗ್ಗೆ ಆತಂಕವಿದ್ದರೂ, ಅವರ ಆತಂಕವನ್ನು ನಿವಾರಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆಂದರು.
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪುನಃ ಅಧಿಕಾರಕ್ಕೆ ಬರಲಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ರಾಜ್ಯದ ಎಲ್ಲಾ ಜನಾಂಗದ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಿದೆ. ರೈತರ ಸಾಲಮನ್ನಾ 3 ಲಕ್ಷದವರೆಗೆ ಬಡ್ಡಿ ರಹಿತ ಸಾಲ, 10 ಲಕ್ಷದವರೆಗೆ 3 ರೂ. ಬಡ್ಡಿ ಸಾಲ ಸೇರಿದಂತೆ ಹತ್ತು ಹಲವು ಯೋಜನೆಗಳು ಸೇರಿದಂತೆ ಕಾಂಗ್ರೆಸ್ ಸರಕಾರಿ ಜನಸಾಮಾನ್ಯರ ಸರಕಾರವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಮಾವೇಶಗಳಿಗೆ ಸಾವಿರಾರು ಸಂಖ್ಯೆಯಲ್ಲಿ ಜನ ಹರಿದು ಬರುತ್ತಿದ್ದಾರೆ. ಇದು ಮುಂದಿನ ಚುನಾವಣೆಯಲ್ಲಿ ಮತ್ತೇ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತದೆ ಎನ್ನುವುದಕ್ಕೆ ನಿದರ್ಶನವಾಗಿದೆ.
ರಾಜ್ಯ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಅವರು ಮಾತನಾಡುತ್ತಾ, ಗೆಲ್ಲುವ ಅಭ್ಯರ್ಥಿಗೆ ಟಿಕೇಟ್ ನೀಡಲಾಗುತ್ತದೆ. ಮುಂದಿನ ಮುಖ್ಯಮಂತ್ರಿ ವಿಷಯಕ್ಕೆ ಸಂಬಂಧಿಸಿ, ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಶಾಸಕಾಂಗ ಪಕ್ಷದ ನಾಯಕರು ಮುಖ್ಯಮಂತ್ರಿಯಾಗುತ್ತಾರೆ. ಬಿಜೆಪಿ ಪಕ್ಷ ಒ‌ಡೆದ ಮನೆಯಾಗಿದೆ. ರಾಜ್ಯದಲ್ಲಿ ಆ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. 5 ವರ್ಷದಲ್ಲಿ 3 ಜನ ಮುಖ್ಯಮಂತ್ರಿಗಳಾದರು ಎಂದು ಲೇವಡಿ ಮಾಡಿದರು. ಜಾದಳ ಪಕ್ಷ ದುರ್ಬಲ ಪಕ್ಷವಾಗಿದೆ. ಕಾಂಗ್ರೆಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಎನ್.ಎಸ್. ಬೋಸರಾಜು, ರುದ್ರಪ್ಪ ಅಂಗಡಿ, ಹೆಚ್.ಬಿ. ಮುರಾರಿ, ಕೆ.ಶಾಂತಪ್ಪ, ಇಲ್ಲೂರು ಗೋಪಾಯ್ಯ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Comment