ರಾಜ್ಯದಲ್ಲಿ ಮುಂದಿನ 24 ಗಂಟೆ ಭಾರಿ ಮಳೆ

ಮಂಗಳೂರು, ಆ. ೨೩- ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಂಟರಗಾಳಿ ಎದ್ದಿರುವ ಹಿನ್ನೆಲೆ 7 ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನೀಡಿರುವ ಎಚ್ಚರಿಕೆಯ ಬೆನ್ನಲ್ಲೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ 115 ರಿಂದ 205 ಮಿ.ಮೀ ಮಳೆಯಾಗುವ ಮುನ್ಸೂಚನೆ ದೊರೆತಿರುವ ಹಿನ್ನೆಲೆ, ಆರೆಂಚ್ ಅಲರ್ಟ್ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆ. 24 ರಿಂದ 27ರವರೆಗೆ 67 ರಿಂದ 115 ಮಿ.ಮೀ ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ ಯಲ್ಲೋ ಅಲರ್ಟ್ ನೀಡಲಾಗಿದ್ದು, ಉಳಿದಂತೆ ರಾಜ್ಯದಲ್ಲಿ ಸಾಧಾರಣ ವ್ಯಾಪಕ ಮಳೆ ಮುಂದುವರೆಯಲಿದ್ದು, ಕೆಲವೆಡೆ ಮಾತ್ರ ಭಾರಿ ಮಳೆಯಾಗುವ ಸಾಧ್ಯತೆ ಇದೆ.

Leave a Comment