ರಾಜ್ಯದ ಹಲವೆಡೆ ಇಂದು ಮಳೆ

ಬೆಂಗಳೂರು, ಡಿ 3 -ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ, ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿರುವ ಕಾರಣ, ರಾಜ್ಯದ ಕರಾವಳಿ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ರಾಜ್ಯದ ಅನೇಕ ಕಡೆ, ಮಳೆಯಾಗುವುದರ ಜೊತೆಗೆ ರಾಜಧಾನಿ ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ ಉಂಟಾಗಿ, ಆಗಾಗ ತುಂತುರು ಮಳೆಯಾಗಲಿದೆ ಎಂದು ವರದಿ ತಿಳಿಸಿದೆ.

 

Leave a Comment