ರಾಜ್ಯಸಭೆ: 5 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

(ನಮ್ಮ ಪ್ರತಿನಿಧಿಯಿಂದ)
ಬೆಂಗಳೂರು, ಮಾ. ೧೩- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇದೇ ತಿಂಗಳ 23 ರಂದು ನಡೆಯಲಿರುವ ಚುನಾವಣೆಗೆ ಸಲ್ಲಿಕೆಯಾಗಿರುವ ಐವರು ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.

ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಎಲ್. ಹನುಮಂತಯ್ಯ, ನಾಸೀರ್‌ಹುಸೇನ್ ಹಾಗೂ ಜೆ.ಸಿ. ಚಂದ್ರಶೇಖರ್ ನಾಮಪತ್ರ ಸಲ್ಲಿಸಿದ್ದು, ಬಿಜೆಪಿಯಿಂದ ರಾಜೀವ್ ಚಂದ್ರಶೇಖರ್ ಹಾಗೂ ಜೆಡಿಎಸ್‌ನಿಂದ ಬಿ.ಎಂ. ಫಾರೂಕ್ ನಾಮಪತ್ರ ಹಾಕಿದ್ದಾರೆ.

ಈ ನಾಮಪತ್ರಗಳ ಪರಿಶೀಲನೆ ಇಂದು ನಡೆದಿದ್ದು, ಎಲ್ಲ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾಧಿಕಾರಿ ಆಗಿರುವ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಸ್. ಮೂರ್ತಿ ಹೇಳಿದರು.

ನಾಮಪತ್ರಗಳನ್ನು ಹಿಂಪಡೆಯಲು ಈ ತಿಂಗಳ 15 ಕಡೆಯ ದಿನವಾಗಿದೆ.

Leave a Comment