ರಾಮಮಂದಿರ ಬಳಿ ಭೀಕರ ರಸ್ತೆ ಅಪಘಾತ

 

ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

ಕಲಬುರಗಿ,ಜು.14-ನಗರದ ಜೇವರ್ಗಿ ರಸ್ತೆಯ ರಾಮ ಮಂದಿರ ವೃತ್ತದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಟಿಪ್ಪರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರ ಹೆಸರು ತಿಳಿದುಬಂದಿಲ್ಲ.

ಸುದ್ದಿ ತಿಳಿದು ಸಂಚಾರಿ ಪೊಲೀಸ್ ಠಾಣೆ-2ರ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ರಾಮಮಂದಿರ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಸಂಚಾರಿ ಪೊಲೀಸ್ ಠಾಣೆ-2ರಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

Leave a Comment